ಕೇಂದ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ: ಖರ್ಗೆ

Date:

Advertisements

ಜನರು ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಬಯಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಜನರು ಸರ್ಕಾರ ಬದಲಾವಣೆಯ ಬಗ್ಗೆ ಆಸಕ್ತಿ ಹೊಂದಿರುವುದು ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಅಂಶಗಳಲ್ಲಿಯೂ ವಿಫಲವಾಗಿದೆ. ಹಣದುಬ್ಬರ ನಿಯಂತ್ರಿಣ ಮತ್ತು ಉದ್ಯೋಗ ಸೃಷ್ಟಿಯಲ್ಲೂ ವಿಫಲವಾಗಿದೆ. ಹೀಗಾಗಿಯೇ, ಕಳೆದ 10 ವರ್ಷಗಳಲ್ಲಿ ಜನರಿಗೆ ತಾವೇನು ಕೊಟ್ಟಿದ್ದೇವೆ ಎಂಬ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಆದರೆ, ಬೇರೆ ವಿಷಯಗಳ ಬಗ್ಗೆ ಹೆಚ್ಚು ಮಾತನಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಮೋದಿ ಸರ್ಕಾರ ಜನರನ್ನು ಬಡತನದಿಂದ ಮೇಲೆತ್ತಲು ವಿಫಲವಾಗಿದೆ. ಬಡತನವನ್ನು ಪರಿಹರಿಸಲು ಯಾವುದೇ ನೀತಿಯನ್ನು ಜಾರಿಗೊಳಿಸಿಲ್ಲ. ಮೋದಿ ಯಾವತ್ತೂ ಬಡವರ ಉದ್ಧಾರ ಮಾಡುವ ಕೆಲಸ ಮಾಡಿಲ್ಲ” ಎಂದಿದ್ದಾರೆ.

Advertisements

ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ನಂಟು ಹೊಂದಿದೆ ಎಂಬ ಮೋದಿ ಆರೋಪದ ವಿರುದ್ಧ ಕಿಡಿಕಾರಿದ ಖರ್ಗೆ, “ನಾವು ಆಹ್ವಾನವಿಲ್ಲದೆ ಪಾಕಿಸ್ತಾನಕ್ಕೆ ಭೇಟಿ ನೀಡುವವರಲ್ಲ ಅಥವಾ ಪಾಕಿಸ್ತಾನದಿಂದ ಯಾವುದೇ ಉಡುಗೊರೆಯನ್ನು ತರುವುದಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಬಲ್ಲವರು ಕಾಂಗ್ರೆಸ್‌ ಜೊತೆ ಸಂಬಂಧ ಹೊಂದಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

“ಮೋದಿ ಆಡಳಿತದಲ್ಲಿ ಕಾರ್ಮಿಕ ಕಾನೂನುಗಳನ್ನು ಹಲವು ಬಾರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ಕಿರುಕುಳ ಅನುಭವಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಎಲ್ಲ ಕಾನೂನುಗಳಲ್ಲಿ ಕಾರ್ಮಿಕರ ಪರವಾದ ಬದಲಾವಣೆಗಳನ್ನು ತರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X