ಪ್ರಜ್ವಲ್ ಲೈಂಗಿಕ ಪ್ರಕರಣ | ಆರೋಪಿ ಎಷ್ಟೇ ಪ್ರಭಾವಿ ಇರಲಿ, ಸಂತ್ರಸ್ತರ ರಕ್ಷಣೆಗೆ ಸರ್ಕಾರ ಸಿದ್ದ: ರಾಹುಲ್‌ ಗಾಂಧಿಗೆ ಸಿಎಂ ಭರವಸೆ

Date:

Advertisements

“ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು” ಎಂದು ರಾಹುಲ್‌ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು. ಈ ಪ್ರಕರಣದದಲ್ಲಿ ಯಾರೇ ಪ್ರಭಾವಿ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಹುಲ್‌ ಮನಿವಿಗೆ ಕೂಡಲೇ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿ, “ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್‌ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ..” ಎಂದು ಸಿದ್ದರಾಮಯಯ್ಯ ಹೇಳಿದ್ದಾರೆ.

Advertisements

ರಾಹುಲ್‌ ಮನವಿ ಏನು?

“ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು” ಎಂದಿದ್ದಾರೆ.

ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​​ ಶಾ ಅವರ ಬಗ್ಗೆಯೂ ಕಿಡಿಕಾರಿದ್ದು, “ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ಮೊದಲೇ ದೇವರಾಜೇಗೌಡ ಮಾಹಿತಿ ನೀಡಿದ್ದಾರೆ. ಆದರೂ ಪ್ರಜ್ವಲ್‌ಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್” ಎಂದು ಹೇಳಿದ್ದಾರೆ.

“ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಮಹಿಳಾ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ಇದು ಮೋದಿ ಪರಿವಾರದ ಸದಸ್ಯರ ಪ್ರಕರಣ” ಎಂದು ಎಂದು ಟೀಕಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X