ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಸಿಬಿಐನಿಂದ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ

Date:

Advertisements

ದೇಶದ ಅತ್ಯಂತ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ನಿಗೆ ಕೇಂದ್ರೀಯ ತನಿಖಾ ದಳ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆಯಿದೆ.

ಸಿಬಿಐನ ಬ್ಲೂ ಕಾರ್ನರ್‌ ನೋಟಿಸ್‌ ವಿದೇಶದಲ್ಲಿರುವ ಅಪರಾಧಿಗಳನ್ನು ಕರೆತರುವ ಪ್ರಕ್ರಿಯೆಯಾಗಿದೆ. ಆರೋಪಿ ಇರುವ ದೇಶದಲ್ಲಿಯೇ ಅಲ್ಲಿನ ಸರ್ಕಾರ ಬಂಧಿಸಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುತ್ತದೆ. ನಂತರದಲ್ಲಿ ಇಲ್ಲಿನ ಪೊಲೀಸ್ ತಂಡ ತೆರಳಿ ಆರೋಪಿಯನ್ನು ಬಂಧಿಸಿ ಕರೆತರುತ್ತದೆ.

33 ವರ್ಷದ ಪ್ರಜ್ವಲ್‌ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಗಳನ್ನು ಎದುರಿಸುತ್ತಿದ್ದು, ಕರ್ನಾಟಕ ಸರ್ಕಾರ ಈತನ ವಿರುದ್ಧ ದೌರ್ಜನ್ಯಗಳನ್ನು ತನಿಖೆಗೊಳಪಡಿಸಲು ಎಸ್‌ಐಟಿ ರಚಿಸಿದೆ. ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣವೂ ಸೇರಿ ಮೂವರು ಮಹಿಳೆಯರು ದೂರು ದಾಖಲಿಸಿದ್ದಾರೆ.

Advertisements

ಪ್ರಜ್ವಲ್‌ನನ್ನು ವಿದೇಶಕ್ಕೆ ತೆರಳಲು ಸಹಕರಿಸಿದ ಕಾರಣ ಈತನ ತಂದೆ ಹೆಚ್‌ ಡಿ ರೇವಣ್ಣನ ವಿರುದ್ಧ ಎಸ್‌ಐಟಿ ಲುಕ್‌ಔಟ್‌ ನೋಟಿಸ್ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 700ಕ್ಕೂ ಹೆಚ್ಚು ನಾಗರಿಕರು ಪ್ರಜ್ವಲ್‌ ರೇವಣ್ಣನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ತನಿಖೆ ಕುರಿತು ವಿಶೇಷ ತನಿಖಾ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸಂಜೆ ತುರ್ತುಸಭೆ ನಡೆಸಿದರು.

ಸಭೆಯ ವೇಳೆ ಮುಖ್ಯಮಂತ್ರಿಗಳಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಿಬಿಐನಿಂದ ಪ್ರಜ್ವಲ್‌ ರೇವಣ್ಣಗೆ ಬ್ಲೂಕಾರ್ನರ್‌ ನೋಟಿಸ್‌ ನೀಡುವ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಿಶೇಷ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ತಮ್ಮ ತಾಯಿಯನ್ನು ಅಪಹರಿಸಿದ್ದಾರೆ ಎಂದು ಸಂತ್ರಸ್ತೆಯ 20 ವರ್ಷದ ಪುತ್ರ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X