ಬೀದರ್‌ | ಭಗವಂತ ಖೂಬಾರನ್ನು ಗೆಲ್ಲಿಸಿ, ನರೇಂದ್ರ ಮೋದಿ ಕೈ ಬಲಪಡಿಸಿ : ಬಂಡೆಪ್ಪಾ ಖಾಶೆಂಪುರ

Date:

Advertisements

ಬೀದರ್ ಲೋಕಸಭಾ ಕ್ಷೇತ್ರದ, ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಎನ್‌ಡಿಎ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಗೆಲ್ಲುವುದು ಅಗತ್ಯವಾಗಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿಯಾಗಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಜೆಡಿಎಸ್‌ ವರಿಷ್ಠರಾದ ದೇವೇಗೌಡರು ಮೋದಿಯವರ ಕೈಯಲ್ಲಿ ದೇಶ ಇರಬೇಕು ಎಂದು ಕರೆ ಕೊಟ್ಟಿದ್ದಾರೆ. ದೇವೇಗೌಡರ ನಿರ್ಧಾರದಿಂದ ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನ ಸೃಷ್ಟಿಯಾಗಿದೆ. ಈಗಿನ ಮೈತ್ರಿಯಲ್ಲಿ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಎಲ್ಲರೂ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಬೀದರ್‌ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಗಾಗಿ ಭಗವಂತ ಖೂಬಾ ಅವರನ್ನು ಮತ್ತೊಮ್ಮೆ ಗೆಲ್ಲಿಸಬೇಕಾಗಿದೆ” ಎಂದರು.

“ರಾಜ್ಯದ ಸರ್ಕಾರದ ಪಂಚ ಗ್ಯಾರಂಟಿಗಳು ವಿಫಲವಾಗಿವೆ, ರೈತರಿಗೆ ಯಾವುದೇ ಗ್ಯಾರಂಟಿ ಕೊಟ್ಟಿಲ್ಲ. 55 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆ ಕೊಡಲು 1.9 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಈ ಪರಿಸ್ಥಿತಿ ನೋಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನಮ್ಮ ದೇಶ, ನಮ್ಮ ರಾಜ್ಯ ರೈತರಿಂದ ಕೂಡಿದೆ. ಶೇ.70ರಷ್ಟು ಜನ ರೈತರು ಇರುವ ನಮ್ಮ ರಾಜ್ಯದಲ್ಲಿ ರೈತರಿಗೆ ಯಾವ ಗ್ಯಾರಂಟಿ ಕೊಟ್ಟಿದ್ದಾರೆ” ಎಂದು ಪ್ರಶ್ನಿಸಿದರು.

Advertisements

ರಾಹುಲ್ ಗಾಂಧಿ ಕ್ಷೇತ್ರ ಬದಲಾವಣೆ ಮಾಡುತ್ತಿರುವುದು ಕಾಂಗ್ರೆಸ್‌ನ ದುಸ್ಥಿತಿಯನ್ನು ತೋರಿಸುತ್ತದೆ. ದೇಶದಲ್ಲಿ ಈಗಾಗಲೇ ಕಾಂಗ್ರೆಸ್ ಮುಳುಗಿ ಹೋಗಿದೆ. ಇನ್ನೂ ಕೆಳಹಂತಕ್ಕೆ ಹೋಗುತ್ತೆ. ಯುಪಿಯಲ್ಲಿಯೇ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಯುಪಿ ಕಾಂಗ್ರೆಸ್ ತವರು ಮನೆಯಾಗಿದೆ. ತವರು ಮನೆಯಲ್ಲಿಯೇ ದಿಕ್ಕಿಲ್ಲದಂತಾಗಿದೆ. ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿದ್ದಾರೆ. ಅಲ್ಲಲ್ಲಿ ಕಾಂಗ್ರೆಸ್ ಸೋತಿದೆ. ರಾಜ್ಯದಲ್ಲಿ ಕೂಡ ಸೋಲುತ್ತದೆ. ಕಾಂಗ್ರೆಸ್‌ನವರು ಹಣಬಲ, ಅಧಿಕಾರ ಬಲದೊಂದಿಗೆ ಚುನಾವಣೆ ಮಾಡುತ್ತಿದ್ದಾರೆ. ಬೇರೆ ಪಕ್ಷದವರನ್ನು ಅಧಿಕಾರ ಬಲ, ಹಣ ಬಲದಿಂದ ಸೆಳೆಯುತ್ತಿದ್ದಾರೆ” ಎಂದು ಖಾಶೆಂಪುರ್ ಆರೋಪಿಸಿದರು.

“ದೇಶದಲ್ಲಿ ನರೇಂದ್ರ ಮೋದಿಯವರ ಆಡಳಿತ ಮನೆಮನೆಗೆ ಮನೆ ಮಾತಾಗಿದೆ. ಭಗವಂತ ಖೂಬಾ ಅವರು ಎರಡನೇ ಬಾರಿಗೆ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾದ ಬಳಿಕ ಉತ್ತಮ ಕೆಲಸ ಮಾಡಿದ್ದಾರೆ. ಸಾಮಾನ್ಯ ಜನರಿಗೂ ಸಿಗುತ್ತಾರೆ ಎಂಬುದು ಜನರಿಗೆ ಗೊತ್ತಿದೆ. ಎಲ್ಲ ಸಮಾಜದವರು ಕೂಡ ಖೂಬಾ ಅವರಿಗೆ ಬೆಂಬಲ ನೀಡಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದ ಜನರು ಭಗವಂತ ಖೂಬಾ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು” ಎಂದು ಖಾಶೆಂಪುರ್ ಮನವಿ ಮಾಡಿದರು.

ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದರೆ ಶಿಕ್ಷೆಯಾಗಲಿ:

ಪ್ರಜ್ವಲ್‌ ಲೈಂಗಿಕ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಬಂಡೆಪ್ಪ ಖಾಶೆಂಪುರ ತಪ್ಪು ಮಾಡಿದ್ರೆ ಶಿಕ್ಷೆ ಆಗಬೇಕು ಎಂದು ನಾವು ಹೇಳಿದ್ದೇವೆ. ರಾಜ್ಯ ಸರ್ಕಾರ ಈಗಾಗಲೇ ಈ ಪ್ರಕರಣ ಎಸ್ಐಟಿಗೆ ಕೊಟ್ಟಿದ್ದಾರೆ. ಅದನ್ನು ನಾವು ಸ್ವಾಗತಿಸಿದ್ದೇವೆ. ಅವರು ಏನೇನು ಕ್ರಮಕೈಗೊಳ್ಳುತ್ತಾರೆ ಎಂದು ಕಾಯ್ದು ನೋಡೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ಶಾಸಕ ಎಚ್ ಡಿ ರೇವಣ್ಣ ಬಂಧನ

ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪುರ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಪ್ರಮುಖರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಬಸವರಾಜ್ ಪಾಟೀಲ್ ಹಾರೂರಗೇರಿ, ಬಾಬುವಾಲಿ, ಪೀರಪ್ಪ ಯರನಳ್ಳಿ, ಸಿದ್ದರಾಮಪ್ಪ ವಂಕೆ, ಅಶೋಕ್ ಕೊಡ್ಗೆ, ರಾಜಶೇಖರ ಜವಳೆ, ಶಶಿ ಹೊಸಳ್ಳಿ, ಶಿವಕುಮಾರ್, ಬಸವರಾಜ್, ಮಲ್ಲಿಕಾರ್ಜುನ ನೆಳಗೆ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X