ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
“ಘಟನೆಯಲ್ಲಿ ಐವರು ಭಾರತೀಯ ವಾಯುಸೇನೆಯ ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ರವಾನೆ ಮಾಡಲಾಗಿದೆ” ಎಂದು ಭಾರತೀಯ ಸೇನೆಯು ಮಾಹಿತಿ ನೀಡಿದೆ.
ವರದಿಗಳ ಪ್ರಕಾರ, ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ.
An Indian Air Force vehicle convoy was attacked by terrorists in the Poonch district of J&K. The local Rashtriya Rifles unit has started cordon and search operations in the area. The vehicles have been secured inside the air base in the General area near Shahsitar. Military… pic.twitter.com/y5uMnAUBfw
— ANI (@ANI) May 4, 2024
ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ ಜನರಲ್ ಏರಿಯಾದಲ್ಲಿರುವ ವಾಯುನೆಲೆಯೊಳಗೆ ವಾಹನಗಳಿಗೆ ಭದ್ರತೆ ಒದಗಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೂಂಚ್ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಭಾಗವಾಗಿದ್ದು, ಮೇ 25ರಂದು ಆರನೇ ಹಂತದಲ್ಲಿ ಈ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
