ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳು ತಾಪಮಾನ ಒತ್ತಡದಲ್ಲಿವೆ. ಪಶ್ಚಿಮ ಬಂಗಾಳದಿಂದ ಒಡಿಶಾ, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ತೆಲಂಗಾಣ, ತಮಿಳುನಾಡು, ಕರ್ನಾಟಕದವರೆಗೆ ಬಿಸಿಲಿನ ಅಬ್ಬರ ಮುಂದುವರಿದಿದೆ.

Advertisements

ಮೇ 7 ರಿಂದ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳಲಿದೆ. ಇದು ಮುಂದಿನ 2 ವಾರಗಳವರೆಗೆ ಬೆಂಗಳೂರು ನಗರದಲ್ಲಿ ತಂಪಾದ ವಾತಾವರಣವನ್ನು ಕಲ್ಪಿಸಲಿದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್‌, ಎಚ್‌ ಡಿ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್​ನಗರದಲ್ಲಿ ಮಳೆಯಾಗಿದೆ. 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 45.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ ಎಂದು ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X