ಗುರು ಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕನನ್ನು ಕೊಂದ ಗ್ರಾಮಸ್ಥರು

Date:

Advertisements

ಸಿಖ್ಖರ ಪವಿತ್ರ ಗ್ರಂಥ ಗುರು ಗ್ರಂಥ ಸಾಹೀಬ್‌ನ ಕೆಲವು ಪುಟಗಳನ್ನು ಹರಿದ ಆರೋಪದ ಹಿನ್ನೆಲೆಯಲ್ಲಿ 19 ವರ್ಷದ ಯುವಕನೊಬ್ಬನನ್ನು ಗ್ರಾಮಸ್ಥರು ಮನಬಂದಂತೆ ಥಳಿಸಿ ಕೊಂದ ಘಟನೆ ಪಂಜಾಬ್‌ನ ಫೆರೋಜ್‌ಪುರ್‌ನಲ್ಲಿನ ಗುರುದ್ವಾರದಲ್ಲಿ ನಡೆದಿದೆ.

ಬಕ್‌ಶೀಶ್‌ ಸಿಂಗ್‌ ಎಂಬಾತ ಬಂದಾಳದಲ್ಲಿನ ಗುರುದ್ವಾರವನ್ನು ಅಪವಿತ್ರಗೊಳಿಸಿದ್ದ. ನಂತರ ಕೋಪಗೊಂಡ ಗುಂಪು ಯುವಕನನ್ನು ಹಿಡಿದು ಮನಬಂದಂತೆ ಥಳಿಸಿದೆ ಎಂದು ಡಿಎಸ್‌ಪಿ ಸುಖ್‌ವಿಂದರ್‌ ಸಿಂಗ್‌ ತಿಳಿಸಿದ್ದಾರೆ.

ಮೃತನು ಮಾನಸಿಕ ಅಸ್ವಸ್ಥನಾಗಿದ್ದು, ಎರಡು ವರ್ಷಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಎಂದು ಆತನ ತಂದೆ ಲಖ್ವಿಂದರ್‌ ಸಿಂಗ್‌ ತಿಳಿಸಿದ್ದಾರೆ. ತಮ್ಮ ಮಗನನ್ನು ಕೊಂದವರ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಿಸುವಂತೆ ಲಖ್ವಿಂದರ್‌ ಸಿಂಗ್‌ ಆಗ್ರಹಿಸಿದ್ದಾರೆ.

Advertisements

ಸ್ಥಳೀಯರ ಪ್ರಕಾರ ಬಕ್‌ಶೀಶ್‌ ಈ ಮೊದಲು ಗುರುದ್ವಾರಕ್ಕೆ ಭೇಟಿ ನೀಡಿರಲಿಲ್ಲ. ನಿನ್ನೆ ಗುರುದ್ವಾರಕ್ಕೆ ಭೇಟಿ ನೀಡಿ ಸಿಖ್ಖರ ಪವಿತ್ರ ಗ್ರಂಥ ಗುರು ಗ್ರಂಥ ಸಾಹೀಬ್‌ನ ಕೆಲವು ಪುಟಗಳನ್ನು ಹರಿದು ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ತಪ್ಪಿಸಿಕೊಂಡು ಓಡುತ್ತಿದ್ದ ಆತನನ್ನು ಸ್ಥಳೀಯರನ್ನು ಹಿಡಿದು ಥಳಿಸಿದ್ದಾರೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಬಕ್‌ಶೀಶ್‌ ಕೈಗಳಿಗೆ ಹಗ್ಗ ಕಟ್ಟಿದ್ದು ದೇಹದಲ್ಲಿ ರಕ್ತ ಸೋರುತ್ತಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ಸಮಯದ ನಂತರ ಮೃತಪಟ್ಟಿದ್ದಾನೆ. ಪರಿಸ್ಥಿತಿ ನಿಯಂತ್ರಣಲ್ಲಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ಬಕ್‌ಶಿಶ್‌ನ ಸಾವು ಅಪರಾಧಿಗಳನ್ನು ಶಿಕ್ಷಿಸುವ ಪ್ರತಿಕ್ರಿಯೆಯಲ್ಲ. ಕಾನೂನು ಕೂಡ ಅಪವಿತ್ರಗೊಳಿಸುವ ಕ್ರಿಯೆಯನ್ನು ತಡೆಯಲಿಲ್ಲ. ಜನರು ಆತನ ಸಾವಿನ ಮೂಲಕ ಬಲವಂತವಾಗಿ ಪಡೆದ ನ್ಯಾಯ ಕೂಡ ಸಮ್ಮತವಲ್ಲ. ಕಾನೂನು ಕೂಡ ತನ್ನ ಕಾರ್ಯವನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಸ್ಥಳೀಯ ಧಾರ್ಮಿಕ ಮುಖಂಡರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X