ಮಾಜಿ ಶಾಸಕ, ಶಿಕ್ಷಣ ಪ್ರೇಮಿ ಡಾ.ನಾಗರೆಡ್ಡಿ ಪಾಟೀಲ್ ನಿಧನ

Date:

Advertisements

ಕಲಬುರಗಿಯ ಜಿಲ್ಲೆಯ ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ ಡಾ.ನಾಗರೆಡ್ಡಿ ಪಾಟೀಲ್ ​(79) ಸೋಮವಾರ (ಮೇ 06) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನಾಗರೆಡ್ಡಿ ಪಾಟೀಲ್​ ಅವರ ಪುತ್ರ ಶಿವಶರಣರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಎರಡೂವರೆ ವರ್ಷ ಶಾಸಕರಾಗಿದ್ದರು. ಆಗ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದರು. ನಾಗರೆಡ್ಡಿ ಅವರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಗೌರವ ಅಧ್ಯಕ್ಷರೂ ಆಗಿದ್ದರು. ಮೃತರ ಅಂತ್ಯಕ್ರಿಯೆ ಮಧ್ಯಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೊನಿ ಪಕ್ಕದ ಸ್ವಂತ ಹೊಲದಲ್ಲಿ ನಡೆಯಲಿದೆ.

Advertisements

ಸಿಎಂ ಸಿದ್ದರಾಮಯ್ಯ ಸಂತಾಪ

ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲ ಬಾರಿ 1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ. ಪಾಟೀಲರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರು. ಅವರ ನಿಧನದಿಂದ ಒಬ್ಬ ಜನಾನುರಾಗಿ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X