ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು ಆಟವಾಡುತ್ತಿದ್ದ ಕೊಳದ ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮೂವರನ್ನು ಪಾಂಡುವ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
STORY | Bomb explosion kills teenager in West Bengal
READ: https://t.co/gHfihJVJgC pic.twitter.com/FT3eIEC91Q
— Press Trust of India (@PTI_News) May 6, 2024
ಇನ್ನುಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಚುಂಚೂರ ಇಮಾಂಬರ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿ | ಸುಮಾರು 100 ಶಾಲೆಗಳಿಗೆ ಬಾಂಬ್ ಬೆದರಿಕೆ
ಬಾಂಬ್ ಸ್ಫೋಟದ ಹಿಂದೆ ಟಿಎಂಸಿ ಕೈವಾಡವಿದೆ, ಟಿಎಂಸಿ ಭಯ ಹುಟ್ಟಿಸುವ ತಂತ್ರ ಮಾಡುತ್ತಿದೆ ಎಂದು ಸ್ಥಳೀಯ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಟಿಎಂಸಿಯ ಪ್ರಮುಖ ನಾಯಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಇಂದು ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿ ಸ್ಫೋಟ ಸಂಭವಿಸಿದೆ.