ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ) 2024 ಪರೀಕ್ಷೆಯನ್ನು ನಡೆಸಿದೆ. ದೇಶದಾದ್ಯಂತ 557 ನಗರಗಳಲ್ಲಿ ಮತ್ತು ವಿದೇಶದ 14 ನಗರಗಳಲ್ಲಿ ಪ್ರರೀಕ್ಷಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆದಿದೆ. ಈ ನಡುವೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡುತ್ತಿದೆ.
ಇನ್ನು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿರುವ ಬಾಲಕಿಯರ ಆದರ್ಶ ವಿದ್ಯಾ ಮಂದಿರ ಶಾಲೆಯಲ್ಲಿ ಹಿಂದಿ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಂಗ್ಲ (ಇಂಗ್ಲಿಷ್) ಮಾಧ್ಯಮದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿದೆ ಎಂದೂ ಕೂಡಾ ವರದಿಯಾಗಿದೆ.
The news of NEET exam paper leaked is a betrayal of the dreams of more than 23 lakh students and their families.
Students are crying for fair and Corruption free exam. 💔 #NEET_PAPER_LEAK #neet2024 #NEET #NEETUG2024 pic.twitter.com/NhMJiGznp3— Shanaya (@Pandeyshanayaa) May 6, 2024
ಈ ಎರಡು ಆರೋಪಗಳ ಬಗ್ಗೆ ಎನ್‌ಟಿಎ ಸ್ಪಷ್ಟಣೆಯನ್ನು ನೀಡಿದೆ. ತಪ್ಪು ಪ್ರಶ್ನೆ ಪತ್ರಿಕೆ ನೀಡಿರುವುದನ್ನು ಒಪ್ಪಿಕೊಂಡಿರುವ ಎನ್‌ಟಿಎ ನೀಟ್ ಯುಜಿ 2024 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ನಿರಾಕರಿಸಿದೆ.
ಇದನ್ನು ಓದಿದ್ದೀರಾ? ಪ್ರಶ್ನೆಪತ್ರಿಕೆ ಸೋರಿಕೆ: ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದು ಪೊಲೀಸ್ ಪರೀಕ್ಷೆ ಅಮಾನ್ಯಗೊಳಿಸಿದ ಯೋಗಿ ಸರ್ಕಾರ
“ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ಜನರಲ್ಲಿ ಆತಂಕ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಯಾರೋ ಸುಳ್ಳು ಸುದ್ದಿ ಹರಡಿದ್ದಾರೆ. ಆದರೆ ಆದರ್ಶ ವಿದ್ಯಾ ಮಂದಿರ ಶಾಲೆಯಲ್ಲಿ ಹಿಂದಿ ಮಾಧ್ಯಮದ ವಿದ್ಯಾರ್ಥಿಗಳಿಗೆ ತಪ್ಪಾಗಿ ಆಂಗ್ಲ ಮಾಧ್ಯಮದ ಪ್ರಶ್ನೆ ಪತ್ರಿಕೆಯನ್ನು ನೀಡಿರುವುದು ಹೌದು. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ತಮ್ಮ ತಪ್ಪನ್ನು ಸರಿಪಡಿಸುವಷ್ಟರಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯೊಂದಿಗೆ ಪರೀಕ್ಷೆ ಕೊಠಡಿಯಿಂದ ಹೊರನಡೆದಿದ್ದಾರೆ” ಎಂದು ಎನ್‌ಟಿಎ ತಿಳಿಸಿದೆ.
ಇದನ್ನು ಓದಿದ್ದೀರಾ? ತೆಲಂಗಾಣ | ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಬಂಧನ
“ನಿಯಮಗಳ ಪ್ರಕಾರ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ನಂತರ ಮಾತ್ರ ಪಶ್ನೆ ಪತ್ರಿಕೆಯೊಂದಿಗೆ ಕೊಠಡಿಯಿಂದ ಹೊರಗೆ ನಡೆಯಬಹುದು. ಆದರೆ ಕೆಲವು ವಿದ್ಯಾರ್ಥಿಗಳು ಬಲವಂತದಿಂದ ಹೊರ ಹೋಗಿದ್ದಾರೆ. ಈ ಕಾರಣದಿಂದಾಗಿ ಪ್ರಶ್ನೆ ಪತ್ರಿಕೆಯು ಸಂಜೆ 4ರ ಸುಮಾರಿಗೆ ಅಂತರ್ಜಾಲದಲ್ಲಿ ಪ್ರಸಾರವಾಗಿದೆ. ಆದರೆ ಅಷ್ಟರಲ್ಲಿ ದೇಶದಾದ್ಯಂತ ಇತರೆ ಎಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಮೇ 5ರಂದು ಮಧ್ಯಾಹ್ನ 2 ರಿಂದ 5:20 ರವರೆಗೆ ನೀಟ್ ಯುಜಿ 2024 ಪರೀಕ್ಷೆ ನಡೆದಿದ್ದು ಈ ವೈದ್ಯಕೀಯ ಪ್ರವೇಶ ಪರೀಕ್ಷೆಯು ದೇಶಾದ್ಯಂತ 557 ನಗರಗಳಲ್ಲಿ ಮತ್ತು ವಿದೇಶದ 14 ನಗರಗಳಲ್ಲಿ ನಡೆದಿದೆ. ಈ ವರ್ಷ, ದಾಖಲೆಯ ಪ್ರಮಾಣದಲ್ಲಿ 23 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.