ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ಭ್ರಷ್ಟಾಚಾರ ಮತ್ತು ಅಕ್ರ ಹಣ ವರ್ಗಾವಣೆ ಪ್ರಕರಣಗಳಲ್ಲಿ ಕವಿತಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಿಬಿಐ ಮತ್ತು ಇಡಿ ಪ್ರಕರಣಗಳ ತನಿಖೆ ನಡೆಸುತ್ತಿವೆ. ಎರಡೂ ಪ್ರಕರಣಗಳಲ್ಲಿ ಕವಿತಾ ಅವರು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಅರ್ಜಿಗಳನ್ನು ವಜಾಗೊಳಿಸಿದ್ದು, ಜಾಮೀನು ನೀಡಲು ನಿರಾಕರಿಸಿದ್ದಾರೆ.
ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿದ್ದ ಕವಿತಾ (46) ಅವರನ್ನು ಇಡಿ ಬಂಧಿಸಿತ್ತು.