ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ ಚುನಾವಣೆ: ಪ್ರಿಯಾಂಕಾ ಗಾಂಧಿ

Date:

Advertisements

ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.

ದೇಶದಲ್ಲಿಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಇಂದು (ಮೇ 7) ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದ್ದು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Advertisements

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ “ಪ್ರಿಯ ದೇಶದ ಜನರೇ, ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ. ಇದು ಐತಿಹಾಸಿಕ ನಿರುದ್ಯೋಗ, ವಿಪರೀತ ಹಣದುಬ್ಬರ, ಸಾಂಸ್ಥಿಕ ಭ್ರಷ್ಟಾಚಾರ ಮತ್ತು ಆರ್ಥಿಕತೆ ಬಿಕ್ಕಟ್ಟನ್ನು ಸೋಲಿಸುವ ಚುನಾವಣೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ರಾಹುಲ್‌ ವಯನಾಡು ತೊರೆದರೆ, ಕೇರಳದಲ್ಲಿ ಕಾಂಗ್ರೆಸ್‌ ಭವಿಷ್ಯವೇನು?; ಕೈ ಹಿಡಿತಾರಾ ಪ್ರಿಯಾಂಕಾ

“ಪ್ರತಿಯೊಂದು ಮತವೂ ಮುಖ್ಯ. ಆಳವಾಗಿ ಆಲೋಚನೆ ಮಾಡಿ ನಂತರ ಮತ ಚಲಾಯಿಸಿ. ನಿಮ್ಮ ವಿವೇಚನೆಯನ್ನು ಬಳಸಿಕೊಂಡು ಹೆಚ್ಚಿನ ಜನರು ಮತ ಹಾಕಿ. ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ” ಎಂದು ಮನವಿ ಮಾಡಿದ್ದಾರೆ.

ಮೂರನೇ ಹಂತದ ಚುನಾವಣೆಯಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತದಾನ ಮಾಡಲು ಅರ್ಹರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X