ಬಿಟ್ ಕಾಯಿನ್ ಹಗರಣ | ವಿಚಾರಣೆಗೆ ಗೈರಾಗಿದ್ದ ಪ್ರಮುಖ ಆರೋಪಿ ಶ್ರೀಕಿ ಬಂಧನ

Date:

Advertisements

ಬಿಟ್​ ಕಾಯಿನ್ ಹಗರಣ​ ಪ್ರಕರಣದ ಪ್ರಮುಖ ಆರೋಪಿ ​ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು. ಆದರೆ, ಆರೋಪಿ ವಿಚಾರಣೆಗೆ ಹಾಜರಾಗದೇ, ತನಗೆ ಹುಷಾರಿಲ್ಲ, ತನ್ನ ತಾಯಿ-ತಂದೆಗೆ ಹುಷಾರಿಲ್ಲ ಎಂಬ ಕಾರಣಗಳನ್ನು ನೀಡುತ್ತಿದ್ದನು.

ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಯನ್ನು ಬಂಧಿಸಿದ್ದಾರೆ. ಮೇ 7ರಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನನ್ನು ವಶಕ್ಕೆ ಪಡೆಯಲು‌ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

Advertisements

ಏನಿದು ಪ್ರಕರಣ?

2015ರಲ್ಲಿ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು.

2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ಯುನೋ ಕಾಯಿನ್​ ಕಳವು ಪ್ರಕರಣ ದಾಖಲಾಗಿತ್ತು. ಯೂನೋಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಎಂಬವರು ಶ್ರೀಕಿ ವಿರುದ್ಧ ದೂರು ನೀಡಿದ್ದರು.

ಕಂಪನಿಯ 60.6 ಬಿಟ್ ಕಾಯಿನ್​ಗಳನ್ನು ಕಳವು ಮಾಡಲಾಗಿದೆ. ಪ್ರತಿ ಬಿಟ್ ಕಾಯಿನ್ ಬೆಲೆ ₹1.67 ಲಕ್ಷದಂತೆ ಸುಮಾರು ₹1.14 ಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು ಮಾಡಲಾಗಿದೆ ಎಂದು ಆರೋಪಿಸಿ ಅವರು ಪ್ರಕರಣ ದಾಖಲಿಸಿದ್ದರು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು.

ಶ್ರೀಕಿ ಕಳೆದ ಐದಾರು ವರ್ಷಗಳಿಂದ ನಾನಾ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿದ್ದನು. ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಕದ್ದಿದ್ದನು ಎಂದು ತಿಳಿದುಬಂದಿದೆ. ಅಲ್ಲದೇ, ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿ ಆರೋಪಿ ಬಂಧನ ಮಾಡಿದ್ದರು. ಆತ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು.

ಈ ನಂತರ ಸಿಸಿಬಿ ಪೊಲೀಸರ ವಿರುದ್ಧ ದಾಖಲೆಗಳನ್ನು ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಹಾಗಾಗಿ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಆದರೆ, ಶ್ರೀಕಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಾಗ ತೆರಳದೇ ಕಳ್ಳಾಟ ಆಡುತ್ತಿದ್ದನು ಎನ್ನಲಾಗಿದೆ. ಹಾಗಾಗಿ ಸಿಐಡಿ ಅಧಿಕಾರಿಗಳು ಆತನನ್ನು ಬಂಧನ ಮಾಡಿದ್ದಾರೆ.

ಬಿಟ್ ಕಾಯಿನ್‌ ಹಗರಣ ಸಂಬಂಧ ತನಿಖೆ‌ ನಡೆಸುತ್ತಿರುವ ಎಸ್ಐಟಿ ಕಾಟನ್ ಪೇಟೆ, ಕೆಂಪೇಗೌಡನಗರ, ಅಶೋಕನಗರ, ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ಎಂಟು ಪ್ರಕರಣಗಳ ಕುರಿತಂತೆ ತನಿಖೆ ನಡೆಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X