ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಶೇ.69.37ರಷ್ಟು ಮತದಾನ

Date:

Advertisements

ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ನಡೆದ ರಾಜ್ಯದ ಎರಡನೇ ಹಂತದ ಮತದಾನ ಬಹುತೇಕ ಕಡೆ ಶಾಂತಿಯುವಾಗಿ ನಡೆದಿದ್ದು, ರಾಜ್ಯದಲ್ಲಿ ಶೇ.69.37ರಷ್ಟು ಮತದಾನ ಕಂಡುಬಂದಿದೆ.

ಎಲ್ಲೆಲ್ಲಿ ಎಷ್ಟು ಮತದಾನವಾಗಿದೆ?

  1. ರಾಯಚೂರು 60.72%
  2. ಬೀದರ್ 63.65%
  3. ಕಲಬುರಗಿ 61.73%
  4. ಚಿಕ್ಕೋಡಿ 74.39%,
  5. ಕೊಪ್ಪಳ 69.50%
  6. ವಿಜಯಪುರ 64.71%,
  7. ಬಾಗಲಕೋಟೆ 70.47%
  8. ಬೆಳಗಾವಿ 70.84%
  9. ಬಳ್ಳಾರಿ 69.74%
  10. ಹಾವೇರಿ 72.59%,
  11. ಶಿವಮೊಗ್ಗ 76.05%
  12. ಉತ್ತರ ಕನ್ನಡ 73.52%,
  13. ದಾವಣಗೆರೆ 75.48%,
  14. ಧಾರವಾಡ ಕ್ಷೇತ್ರದಲ್ಲಿ ಶೇ. 70.54ರಷ್ಟು ಮತದಾನವಾಗಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಏಪ್ರಿಲ್ 26ರಂದು ಮತದಾನ ಪ್ರಕ್ರಿಯೆ ನಡೆದಿತ್ತು.

Advertisements

ಮಂಡ್ಯದಲ್ಲಿ (ಶೇ 81.67), ಕೋಲಾರದಲ್ಲಿ (ಶೇ 78.27) ಮತ್ತು ತುಮಕೂರಿನಲ್ಲಿ (ಶೇ 78.05 ರಷ್ಟು) ಅತಿ ಹೆಚ್ಚು ಮತದಾನವಾಗಿತ್ತು. ಬೆಂಗಳೂರು ಸೆಟ್ರಲ್​​​ನಲ್ಲಿ ಶೇ 54.06, ಬೆಂಗಳೂರು ದಕ್ಷಿಣದಲ್ಲಿ ಶೇ 53.17, ಬೆಂಗಳೂರು ಉತ್ತರದಲ್ಲಿ ಶೇ 54.45 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಶೇ 68.30ರಷ್ಟು ಮತದಾನವಾಗಿತ್ತು.

ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ ಒಟ್ಟು 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಒಟ್ಟಾರೆ 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ ಭದ್ರವಾಗಿದ್ದು, ಯಾರು ಗೆಲ್ಲಲಿದ್ದಾರೆ? ಯಾರು ಸೋಲುತ್ತಾರೆ ಎನ್ನುವುದನ್ನು ಜೂನ್ 4ರವರೆಗೆ ಕಾಯಬೇಕಿದೆ. ದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನೂ ಕೂಡ ನಾಲ್ಕು ಹಂತಗಳು ಬಾಕಿ ಇವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X