ಬೀದರ್‌ | ಒಂದೂವರೆ ವರ್ಷದ ಮಗು ಅಪಹರಣ; ಮೂರು ದಿನದ ಬಳಿಕ ತಾಯಿ ಮಡಿಲಿಗೆ

Date:

Advertisements

ಬೀದರ್‌ ನಗರದ ನಯಾಕಮಾನ್‌ ಬಳಿ ಮೇ 4ರಂದು ಅಪಹರಣಕ್ಕೊಳಗಾದ ಒಂದೂವರೆ ವರ್ಷದ ಮಗುವನ್ನು ಬೀದರ್ ಪೊಲೀಸರು ಮೂರು ದಿನದಲ್ಲಿಯೇ ಪತ್ತೆ ಹಚ್ಚುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

ನಗರದ ಓಲ್ಡ್ ಸಿಟಿಯ ನಯಾಕಮಾನ್​ ಬಳಿ ಉತ್ತರ ಪ್ರದೇಶ ಮೂಲದ ದಂಪತಿ ಕೆಲಸದ ಮಾಡುವ ಸ್ಥಳದ ಸಮೀಪ ಮಗು ಆಟವಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಅಪಹರಿಸಿದ್ದರು. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಈ ಕುರಿತು ಬೀದರ್ ನಗರ ಪೊಲೀಸ್ ‌ಠಾಣೆಯಲ್ಲಿ‌ ಮೇ 4ರಂದು ಪ್ರಕರಣ ‌ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಎಸ್.ಪಿ. ಚನ್ನಬಸವಣ್ಣ ಎಸ್‌.ಎಲ್‌, ಡಿವೈಎಸ್ಪಿ ನೇತ್ರತ್ವದ ತಂಡ ಮಗುವಿನ ಪತ್ತೆಗಾಗಿ 30 ಜನರ ಪೋಲೀಸ್ ತಂಡ ರಚಿಸಿದ್ದರು.

Advertisements

ಸತತ ತನಿಖೆ ನಡೆಸಿದ ಪೊಲೀಸರು ಮಹಿಳೆ ಹಾಗೂ ಮಗುವನ್ನು ಹೈದರಾಬಾದ್‌ ಸಮೀಪದ ಪಟನಚೂರ್‌ ಬಳಿ ಪತ್ತೆ ಹಚ್ಚಿದ್ದಾರೆ. ಹೈದರಾಬಾದ್ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹಿಳೆಯನ್ನು ಬೀದರ್‌ಗೆ ಕರೆ ತರಲಾಗಿದೆ, ಮಗು ಅಪಹರಣದ ಹಿಂದಿನ ಉದ್ದೇಶ ಬಗ್ಗೆ ತನಿಖೆ ಮುಂದುವರೆಯುತ್ತದೆ ಎಂದು ಎಸ್.ಪಿ. ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿಯ ಇಂದಿನ ಸುಳ್ಳುಗಳು | ಅಂಬೇಡ್ಕರ್‌ ಹೆಸರಿನಲ್ಲಿ ಚುನಾವಣಾ ವ್ಯಾಪಾರ ಮಾಡುತ್ತಿದ್ದಾರಾ ಮೋದಿ?

ಮಂಗಳವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌ ಅವರು ಅಪಹರಣಕ್ಕೊಳಗಾದ ಒಂದೂವರೆ ವರ್ಷ ವಯಸ್ಸಿನ ಅರವಿಂದ ಎಂಬ ಮಗುವನ್ನು ಸುರಕ್ಷಿತವಾಗಿ ತಾಯಿ ಮಡಿಲಿಗೆ ಹಸ್ತಾಂತರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X