ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬೆತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.
Breaking |
बैतूल में EVM और मतदान कर्मियों को लेकर लौट रही बस में आग लगी,
हादसे में सभी कर्मचारी सुरक्षित है, मतदान सामग्री को आंशिक नुकसान होने की खबर है। pic.twitter.com/QTS0qgIwn3
— Sandeep Chaudhary commentary (@newsSChaudhry) May 8, 2024
ಜಿಲ್ಲೆಯ ಗೋಲಾ ಗ್ರಾಮದ ಬಳಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬಸ್‌ನಲ್ಲಿ ಕಿಡಿ ಕಾಣಿಸಿಕೊಂಡಿದ್ದು ಅದು ಹಬ್ಬಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೀದರ್ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ
ಬೂತ್ ಸಂಖ್ಯೆ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಈ ಬೆಂಕಿ ಅವಘಡದಿಂದಾಗಿ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ್ದು ಬಸ್ ಸಂಪೂರ್ಣರ್ವಾಗಿ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.
ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಆರು ಮತಗಟ್ಟೆಗಳ ಅಧಿಕಾರಿಗಳು ಮತ್ತು ಆ ಮತಗಟ್ಟೆಗಳ ಇವಿಎಂಗಳು ಇದ್ದವು. ಈ ಪೈಕಿ ನಾಲ್ಕು ಇವಿಎಂಗಳು ಹಾನಿಗೊಳಗಾಗಿವೆ ಮತ್ತು ಎರಡು ಸುರಕ್ಷಿತವಾಗಿವೆ ಎಂದು ಸೂರ್ಯವಂಶಿ ಹೇಳಿದರು.
ಇದನ್ನು ಓದಿದ್ದೀರಾ? ವಿಜಯಪುರ | ಟೈರ್ ಸ್ಪೋಟದಿಂದ ಹೊತ್ತಿದ ಬೆಂಕಿ; ಖಾಸಗಿ ಬಸ್ ಭಸ್ಮ
ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.72.65ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.