ಹೈದರಾಬಾದ್‌ನಲ್ಲಿ ಭಾರಿ ಮಳೆ; ಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಮಂದಿ ಸಾವು

Date:

Advertisements

ಹೈದರಾಬಾದ್ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ತಿರುಪತಿ (22), ಶಂಕರ್ (22), ರಾಜು (25) ಖುಷಿ (25) ರಾಮ್ ಯಾದವ್ (34), ಗೀತಾ (32), ಮತ್ತು ಹಿಮಾಂಶು (4) ಮೃತರು ಎಂದು ಗುರುತಿಸಲಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್‌ಗಢ ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ಗೋಡೆ ಕುಸಿದು ಬಿದ್ದಿರುವ ಸ್ಥಳ ಪಕ್ಕದ ಶೆಡ್‌ನಲ್ಲಿ ಕಾರ್ಮಿಕರು ವಾಸಿಸುತ್ತಿದ್ದರು. ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಾರ್ಯಾಚರಣೆ ನಡೆಸಿ ಐದು ಜನ ಕಾರ್ಮಿಕರನ್ನು ರಕ್ಷಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | 9 ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡಿರುವ ಎಸ್‌ಐಟಿ

ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಹೈದರಾಬಾದ್ ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಟ್ರಾಫಿಕ್ ಅವ್ಯವಸ್ಥೆ, ವಿದ್ಯುತ್ ಕಡಿತ ಮತ್ತು ಅನೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ನಗರದಾದ್ಯಂತ ಜಲಾವೃತ ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲು ವಿಪತ್ತು ಪರಿಹಾರ ಪಡೆ (ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಮ್‌ಸಿ) ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X