ಪ್ರಜ್ವಲ್ ಲೈಂಗಿಕ ಹಗರಣ | ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ: ಸಚಿವ ಕೃಷ್ಣಬೈರೇಗೌಡ

Date:

Advertisements

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣವಿದು. ಮಾನಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಪ್ರಜ್ವಲ್ ಲೈಂಗಿಕ ಹಗರಣದ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು” ಎಂದರು.

“ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ, ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ – ಇದರ ವಿರುದ್ದ ಮಾತನಾಡಿದ್ದು ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ತರ ಮಾನ ಹರಣವಾಗಿದೆ – ಈಗ ನ್ಯಾಯ ಹರಣ ಮಾಡಲಾಗುತ್ತಿದೆ” ಎಂದು ಕಿಡಿಕಾರಿದರು.

Advertisements

“ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು. ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಪ್ರಕರಣದ ಆರೋಪಿಯ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ನಾಯಕನಿಗೆ ಕೊಟ್ಟರು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲಾಗಿದೆ. ಇದನ್ನು ತೆಗೆದುಕೊಂಡವನು ವಕೀಲ ನ್ಯಾಯದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಪೊಲೀಸರ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜಾಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ” ಎಂದರು.

“ಪ್ರಹ್ಲಾದ್ ಜೋಶಿ, ಮೋದಿ ಅವರು ಜೆಡಿಎಸ್ ವಿರುದ್ದ ಮಾತನಾಡಲು ಆಗುತ್ತಿಲ್ಲ. ಅದಕ್ಕಾಗಿ, ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸು ಎಂದು ಕಾಂಗ್ರೆಸ್ ಹೇಳಿತ್ತೇ? ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಬಿಜೆಪಿಗರು ಅಪಹರಣ ಮಾಡಿದ್ದೂ ಸುಳ್ಳು ಎಂದು ಹೇಳುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ರಾಜೀವ್ ಗೌಡ, ಶಾಸಕರಾದ ರಮೇಶ್ ಬಾಬು, ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ವಕ್ತಾರರೆ ಶ್ರೀಮತಿ ತೇಜಶ್ವಿನಿ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X