ಇಂದು (ಮೇ 9) ರಾಜ್ಯದಾದ್ಯಂತ 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದೆ.
ಕರ್ನಾಟಕದಲ್ಲಿ 2,750 ಕೇಂದ್ರಗಳಲ್ಲಿ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದೆ. 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಇದನ್ನು ಓದಿದ್ದೀರಾ? ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಸಾವು
ಇದೇ ಮೊದಲ ಬಾರಿಗೆ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಮೇ ಮೂರನೇ ವಾರದಲ್ಲೇ ಎರಡನೇ ಪರೀಕ್ಷೆ ಆರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಇನ್ನುಳಿದ ಎರಡು ಪರೀಕ್ಷೆಯನ್ನು ಬರೆಯಬಹುದು. ಯಾವ ಪರೀಕ್ಷೆಯಲ್ಲಿ ಅಧಿಕ ಅಂಕ ಬರುತ್ತವೆಯೋ ಅದರ ಅಂಕಪಟ್ಟಿ ಪಡೆದುಕೊಳ್ಳಬಹುದು.
ಫಲಿತಾಂಶ ಎಲ್ಲಿ, ಹೇಗೆ ವೀಕ್ಷಿಸುವುದು?
ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶ ನೋಡಲು ನೀವು https://karresults.nic.in/ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಹಾಗೆಯೇ ಕೆಲವು ಶಾಲೆಗಳಲ್ಲಿ ಫಲಿತಾಂಶ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಕೂಡ ಮಾಡಲಾಗಿದೆ.
ಇನ್ನು ಫಲಿತಾಂಶ ಪ್ರಕಟವಾಗುವ ಮುನ್ನ ಕರ್ನಾಟಕ ಪರೀಕ್ಷಾ ಮಂಡಳಿ ಸುದ್ದಿಗೋಷ್ಠಿ ನಡೆಸಲಿದ್ದು, ಅದಾದ ಬಳಿಕ ಅಧಿಕೃತವಾಗಿ ಫಲಿತಾಂಶ ರಿಲೀಸ್ ಮಾಡಲಾಗುತ್ತದೆ.