ಲೋಕಸಭೆ ಚುನಾವಣೆ| ಕಾಂಗ್ರೆಸ್ ಅನ್ನು ಹಾಡಿ ಹೊಗಳಿ ಬಿಜೆಪಿಯನ್ನು ತೆಗಳಿದ ಚಕ್ರವರ್ತಿ ಸೂಲಿಬೆಲೆ!

Date:

Advertisements

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನ ಪ್ರಚಾರ ಶ್ರಮವನ್ನು ಹಾಡಿ ಹೊಗಳಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ ಅವರು ಬಿಜೆಪಿಯನ್ನು ತೆಗಳಿದ್ದಾರೆ!

ಲೋಕಸಭೆ ಚುನಾವಣೆಯ ನಮೋ ಬ್ರಿಗೇಡ್ ಯಾತ್ರೆಯನ್ನು ಮುಗಿಸಿದ ಬಳಿಕ ಫೇಸ್‌ಬುಕ್‌ನಲ್ಲಿ ಲೈವ್‌ ಬಂದು ಮಾತನಾಡಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಬಿಜೆಪಿಯ ಪ್ರಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ಅದ್ಭುತವಾಗಿ ಕೆಲಸ ಮಾಡಿದ್ದೀರಿ. 2014 ಮತ್ತು 2019ನಲ್ಲಿ ನೀವು ಮಾಡದ ಕಾರ್ಯಗಳನ್ನು ಈಗ ತುಂಬಾ ಚೆನ್ನಾಗಿ ಮಾಡಿದ್ದೀರಿ. ಈ ನಿಟ್ಟಿನಲ್ಲಿ ನಾನು ನಿಮಗೆ ಶುಭಾಶಯ ತಿಳಿಸುತ್ತೇನೆ” ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

Advertisements

ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ತೆಗಳಿರುವ ಸೂಲಿಬೆಲೆ, “ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗಿಂತ ಚೆನ್ನಾಗಿ ಪ್ರಚಾರ ಮಾಡಿದ್ದೀರಿ. ಬಿಜೆಪಿಗರು ಅನೇಕ ಮನೆಗಳಿಗೆ ಭೇಟಿ ನೀಡಿಲ್ಲ. ಬಹುತೇಕ ಕಡೆಗಳಲ್ಲಿ ಬಿಜೆಪಿಗರಿಗೆ ಮನೆ ಮನೆ ಭೇಟಿ ಸಾಧ್ಯವೇ ಆಗಿಲ್ಲ. ಮನೆ ಮನೆ ಭೇಟಿ ಮಾಡಿ ಪ್ರಚಾರ ಮಾಡುವುದರಲ್ಲಿ ಯಾವತ್ತೂ ಬಿಜೆಪಿ ಕಾರ್ಯಕರ್ತರು ಅಗ್ರಣಿಯರಾಗಿರುತ್ತಿದ್ದರು. ಆದರೆ ಈ ಚುನಾವಣೆಯಲ್ಲಿ ಸಂಪೂರ್ಣವಾಗಿ ಅದರ ಅನುಪಸ್ಥಿತಿ ನಾನು ಗಮನಿಸಿದ್ದೇನೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

“ಕಾಂಗ್ರೆಸ್‌ನವರಿಗೆ ಕಾರ್ಯಕರ್ತರು ಇಲ್ಲ. ಆದರೂ ಎನ್‌ಜಿಒಗಳ ಮೂಲಕ, ಇತರೆ ರೀತಿಯಲ್ಲಿ, ಹೇಗೋ ಪ್ರಯತ್ನ ಮಾಡಿ ಮನೆ ಮನೆಗೆ ಕರಪತ್ರ ನೀಡಿದ್ದಾರೆ, ಗ್ಯಾರಂಟಿ ಕಾರ್ಡ್‌ಗಳನ್ನು ಹಂಚುವ ಮೂಲಕ ಉತ್ತಮ ಪ್ರಯತ್ನ ಮಾಡಿದ್ದಾರೆ” ಎಂದು ಶ್ಲಾಘಿಸಿದ್ದಾರೆ.

“ಹಾಗಿರುವಾಗ ಈ ಚುನಾವಣೆಯ ಫಲಿತಾಂಶ ಏನಾಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದರು, ನಾನು ಆ ಅಂದಾಜು ಮಾಡಲು ಸಾಧ್ಯವಿಲ್ಲ. ನಾನು ಪ್ರಾಮಾಣಿಕವಾಗಿ ಎಲ್ಲವುದರ ವಾಸ್ತವ ಅರಿತುಕೊಂಡಿರುವ ಕಾರಣ, ಏನು ನಡೆಯುತ್ತಿದೆ ಎಂದು ನೋಡಿರುವ ಕಾರಣದಿಂದಾಗಿ ಈಗಲೇ ಏನನ್ನೂ ಅಂದಾಜು ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕರ್ನಾಟಕದಲ್ಲಿ ಬಿಜೆಪಿಗೆ ಸೋಲಿನ ಸುಳಿವು ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲು

“ಆದರೆ ನರೇಂದ್ರ ಮೋದಿ ಅವರ ಅಲೆ ಮತ್ತು ಗ್ಯಾರಂಟಿ ಕಾರ್ಡ್, ಕಾಂಗ್ರೆಸ್‌ನವರ ಪರಿಶ್ರಮ ಇವೆರಡ ನಡುವೆ ಭರ್ಜರಿಯಾದ ಹೋರಾಟ ನಡೆಯುತ್ತಿದೆ. ಹೇಗೆ ಫಲಿತಾಂಶ ಬರುತ್ತದೆ ಎಂದು ನಾವು ನೋಡಬೇಕು” ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.

“ಜನರು ಉರಿ ಬಿಸಿಲಿನಲ್ಲೂ ಬಂದು ಮತ ಹಾಕಿದ್ದಾರೆ. ಉತ್ತಮ ಪ್ರಮಾಣದಲ್ಲಿ ಮತದಾನ ನಡೆದಿದೆ. ಆದರೆ ಈ ವೋಟು ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದ ವೋಟೋ ಅಥವಾ ಗ್ಯಾರಂಟಿ ಮೇಲಿನ ಆಸೆಯ ವೋಟು ಎಂದು ಜೂನ್ 4ರಂದು ತಿಳಿದು ಬರಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಮೋದಿಯಂತೆ ಚಕ್ರವರ್ತಿ ಸೂಲಿಬೆಲೆ ಕೂಡಾ ಒಬ್ಬ ಪ್ರಸಿದ್ಧ ಭಾಷಣಗಾರ. ಇವರ ಭಾಷಣಗಳಲ್ಲಿ ಬಹುಪಾಲು ವ್ಯಂಗ್ಯ , ದ್ವೇಷ , ಸುಳ್ಳು , ಚಾರಿತ್ರ ವಧೆ , ಅಸಭ್ಯತೆ , ಅಸಹಿಷ್ಣತೆ , ತುಚ್ಚೀಕರಣಗಳಿಂದ ತುಂಬಿರುತ್ತದೆ. ಇವರ ಭಾಷಣಗಳನ್ನು ಕೇಳಿ ಅನೇಕರು ತಲೆದೂಗುತ್ತಾರೆ ; ಆದರೆ ಯಾರೂ ಮರುಳಾಗಬಾರದು !

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X