32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮೆ: ಕೃಷ್ಣ ಬೈರೇಗೌಡ

Date:

Advertisements

ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2,000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ. ಇದಲ್ಲದೆ, ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

“ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಲಾಗಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಗಳನ್ನು ನಡೆಸಲಾಗಿದೆ. ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.

“153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ” ಎಂದು ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X