ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ ಸರ್ಕಾರ ರಚನೆಯಾದರೆ ಆಗಸ್ಟ್ 15ರೊಳಗೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಶುರು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ತೆಲಂಗಾಣದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ತಮ್ಮ ಸಂಪೂರ್ಣ ರಾಜಕೀಯ ಜೀವನದಲ್ಲಿ 22 ರಿಂದ 25 ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಲ್ಲದೆ ಮೋದಿಯವರು ಕೋಟ್ಯಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ. ನೋಟುಗಳ ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ್ದು ಅದಾನಿಗಾಗಿ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ
ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ನೂತನ ಸರ್ಕಾರ ಆಗಸ್ಟ್ 15ರೊಳಗೆ ಕೇಂದ್ರ ಸರ್ಕಾರದದಲ್ಲಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು ರಾಹುಲ್ ತಿಳಿಸಿದರು.
“ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ ಆದರೆ ಕಾಂಗ್ರೆಸ್ ಮೀಸಲಾತಿಯ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಉದ್ದೇಶಿಸಿದೆ. ನೀವು ಕಾಂಗ್ರೆಸ್ಗೆ ಮತ ನೀಡಿದರೆ ದೇಶಾದ್ಯಂತ ಜಾತಿ ಜನಗಣತಿಯನ್ನು ನಡೆಸಲಿದೆ.ಬಿಜೆಪಿಯ ಕೆಲವು ನಾಯಕರು ಸಂವಿದಾನವನ್ನು ಬದಲಿಸಲು ಬಯಸುತ್ತಾರೆ. ಆದರೆ ಯಾವುದೇ ಶಕ್ತಿ ಇದನ್ನು ಮಾಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.
