ದೆಹಲಿ | 8 ವರ್ಷದ ಬಾಲಕಿ ಅಪಹರಿಸಿ 24 ಗಂಟೆಗಳ ಕಾಲ ಕಿರುಕುಳ; ಆರೋಪಿ ಬಂಧನ

Date:

Advertisements

ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ ಮೇಲೆ ಕಚ್ಚಿದ ಹಲ್ಲುಗಳ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 6 ರಂದು ಕೋಟ್ಲಾ ಮುಬಾರಕ್‌ಪುರ ಪ್ರದೇಶದಿಂದ ಬಾಲಕಿಯನ್ನು ಅಪಹರಿಸಲಾಗಿತ್ತು. ಆಕೆಯ ಅಪಹರಣವಾದ ಸುಮಾರು 24 ಗಂಟೆಗಳ ನಂತರ ಅಕೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಘಟನೆಯ ನಂತರ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ದೈಹಿಕ ಸ್ಥಿತಿ ಸ್ಥಿರವಾಗಿದ್ದರೂ, ಆಘಾತಕಾರಿ ಘಟನೆಯಿಂದ ಮಾನಸಿಕ ಪರಿಣಾಮಗಳನ್ನು ಎದುರಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಆರೋಪಿ ಅರ್ಜುನ್ ಅಲಿಯಾಸ್ ಮೊಹಮ್ಮದ್ ಉಮರ್ ಎಂಬಾನತನ್ನು ಬಂಧಿಸಲಾಗಿದೆ. ಈ ಹಿಂದೆಯೂ ಅತ ಇದೇ ರೀತಿಯ ಹೇಯ ಕೃತ್ಯ ಎಸಗಿದ್ದ ಎಂದು ಶಂಕಿಸಲಾಗಿದೆ. ಮೇ 6ರಂದು ಮಧ್ಯಾಹ್ನ ಅಂಧೇರಿಯಾ ಮೋಡ್‌ನಲ್ಲಿರುವ ತನ್ನ ನಿವಾಸಕ್ಕೆ ಬಾಲಕಿಯನ್ನು ಕರೆದೊಯ್ದಿದ್ದ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಮಾನಸಿಕ ಅಸ್ವಸ್ತತೆಯ ಲಕ್ಷಣಗಳನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ.

“ಆರೋಪಿಗಳನ್ನು ಗುರುತಿಸಲು ನಾವು ಡಿಟಿಸಿ ಬಸ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಅಪಹರಣಕ್ಕೊಳಗಾದ ಬಾಲಕಿಯ ವಿವರಗಳನ್ನು ಪೊಲೀಸ್ ನೆಟ್‌ವರ್ಕ್‌ನಲ್ಲಿ ಹಂಚಿಕೊಳ್ಳಲಾಗಿತ್ತು. ಮಂಗಳವಾರ ಬಾಲಕಿಯನ್ನು ರಕ್ಷಿಸಲಾಗಿದೆ. ಪೊಲೀಸರು ಉಮರ್‌ನನ್ನು ಬಂಧಿಸಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾಣ್ ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಉಮರ್ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ‘ತಾನು ಗಾಜಿನಿಂದ ಸಣ್ಣ ಆಟಿಕೆಗಳನ್ನು ತಯಾರಿಸುತ್ತೇನೆ. ಗಾಜು ಸಂಗ್ರಹಿಸಲು ಕೋಟ್ಲಾಗೆ ಬಂದಿದ್ದೆ. ಅಲ್ಲಿ ಬಾಲಕಿ ಆಟವಾಡುತ್ತಿದ್ದಳು. ಆಕೆಯನ್ನು ಅಪಹರಿಸಿದೆ’ ಎಂದು ಆತ ಹೇಳಿದ್ದಾನೆ” ಎಂದು ಡಿಸಿಪಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X