ಅಪ್ರಾಪ್ತ ಪುತ್ರನಿಂದ ಮತ ಚಲಾಯಿಸಿದ ಬಿಜೆಪಿ ನಾಯಕ; ಎಫ್‌ಐಆರ್ ದಾಖಲು – ಬೂತ್ ಅಧಿಕಾರಿ ಅಮಾನತು

Date:

Advertisements

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿ ಬಿಜೆಪಿ ನಾಯಕ ವಿನಯ್ ಮೆಹರ್ ಅವರು ತಮ್ಮ ಅಪ್ರಾಪ್ತ ಪುತ್ರನಿಂದ ಮತ ಚಾಲಯಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಮೆಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರು ಮತ ಚಲಾಯಿಸಿದ ಬೂತ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮಂಗಳವಾರ ನಡೆದ 3ನೇ ಹಂತದ ಮತದಾನದ ವೇಳೆ, ಭೋಪಾಲ್‌ನ ಬೆರಾಸಿಯಾ ಮತಗಟ್ಟೆಯಲ್ಲಿ ತಮ್ಮ ಪುತ್ರನ ಮೂಲಕ ಮೆಹರ್ ಅವರು ಮತ ಚಲಾಯಿಸಿದ್ದರು. ಅದನ್ನು ವಿಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು, ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತಗಟ್ಟೆಯ ಅಧಿಕಾರಿ ಸಂದೀಪ್ ಸೈನಿ ಅವರನ್ನು ಅಮಾನತುಗೊಳಿಸಲಾಗಿದೆ.

14 ಸೆಕೆಂಡುಗಳ ವೀಡಿಯೊವನ್ನು ಹಂಚಿಕೊಂಡು, ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಮಾಧ್ಯಮ ಸಲಹೆಗಾರ ಪಿಯೂಷ್ ಬಾಬೆಲೆ, “ಬಿಜೆಪಿಯ ಜಿಲ್ಲಾ ಪಂಚಾಯಿತಿ ಸದಸ್ಯ ವಿನಯ್ ಮೆಹರ್ ಅವರು ತಮ್ಮ ಅಪ್ರಾಪ್ತ ಮಗ ಮತ ಚಲಾಯಿಸುವಂತೆ ಮಾಡಿದ್ದಾರೆ. ವಿಡಿಯೋ ಮಾಡಿ, ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾರಾ” ಎಂದು ಪ್ರಶ್ನಿಸಿದ್ದಾರೆ.

Advertisements

ಅಲ್ಲದೆ, ಮತಗಟ್ಟೆಗೆ ಮೊಬೈಲ್ ಫೋನ್‌ ತೆಗೆದುಕೊಂಡು ಹೋಗಲು ಹೇಗೆ ಅನುಮತಿ ನೀಡಲಾಯಿತು. ರೆಕಾರ್ಡಿಂಗ್ ಮಾಡಿಕೊಳ್ಳಲು ಅವಕಾಶ ನೀಡಿದ್ದು ಯಾಕೆ ಎಂದು ಕಾಂಗ್ರೆಸ್‌ ಕೇಳಿದೆ.

 

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್, “ಎಫ್‌ಐಆರ್ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ತಪ್ಪುತಸ್ಥರೆಂದು ಕಂಡಬಂದಲ್ಲಿ ಮತಗಟ್ಟೆ ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ಬಾಲಕ ಇವಿಎಂನಲ್ಲಿ ಬಿಜೆಪಿ ಚಿಹ್ನೆಯ ಬಟನ್‌ಅನ್ನು ಒತ್ತುತ್ತಿರುವುದು ಮತ್ತು VVPAT ಮೂಲಕ ಮತವನ್ನು ನೋಂದಾಯಿಸಲಾಗಿದೆ ಎಂಬುದನ್ನು ತೋರುತ್ತಿರುವುದು ಕಂಡುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X