ಬೆಂಗಳೂರು | ಮಳೆಯಿಂದ ಉಂಟಾಗುವ ಸಮಸ್ಯೆ ಬಗೆಹರಿಸಲು ಸಹಾಯವಾಣಿ ತೆರೆದ ಬಿಬಿಎಂಪಿ, ಬೆಸ್ಕಾಂ

Date:

Advertisements

ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹಾರ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಪತ್ತು ನಿರ್ವಹಣಾ ಸಹಾಯವಾಣಿ ತೆರೆದಿದೆ.

ಬೆಂಗಳೂರಿನ 8 ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ಓಪನ್ ಮಾಡಿದ್ದು, ಕರೆ ಮಾಡಿದ ತಕ್ಷಣ ಪಾಲಿಕೆ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜತೆಗೆ ಮಹಾನಗರದ ನಾನಾ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.

ವಲಯವಾರು ಕಂಟ್ರೋಲ್ ರೂಮ್‌ಗಳ ಸಂಪರ್ಕ ಸಂಖ್ಯೆ ವಿವರ

Advertisements

ಬೊಮ್ಮನಹಳ್ಳಿ ವಲಯ: 080-25732447,25735642,9480685707

ದಾಸರಹಳ್ಳಿ ವಲಯ: 080-28394909,9480685709

ಪೂರ್ವ ವಲಯ: 080-22975803,9480685702

ಮಹದೇವಪುರ ವಲಯ: 080-28512300,9480685706

ರಾಜರಾಜೇಶ್ವರಿ ನಗರ ವಲಯ: 080-28601851,9480685708

ದಕ್ಷಿಣ ವಲಯ: 9480685704,8026566362,8022975703

ಪಶ್ಚಿಮ ವಲಯ: 080-23463366,23561692,9480685703

ಯಲಹಂಕ ವಲಯ: 080-23636671,22975936,9480685705

ಮಳೆ ಸಂದರ್ಭದಲ್ಲಿ ವಲಯವಾರು ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಈ ಕ್ರಮಕೈಗೊಂಡಿದ್ದು, ನಾಗರಿಕರು ತುರ್ತು ಸಂದರ್ಭದಲ್ಲಿ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

ವಿದ್ಯುತ್‌ ಸಮಸ್ಯೆ ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ಸಹಾಯವಾಣಿ

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ವಾಟ್ಸ್‌ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಆಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ.

ಜತೆಗೆ ಎಸ್‌ಎಂಎಸ್ ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ, ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಗ್ರಾಹಕರಿಗೆ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ.

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ-  9449844640.

ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X