ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆಗೆ ಮುಂದಾದ ಬಿಬಿಎಂಪಿ

Date:

Advertisements

ಮುಂಗಾರು ಸಮಯದಲ್ಲಿ ಉಂಟಾಗುತ್ತಿರುವ ಮಳೆಯ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ. ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ (Water Level Sensor)ಗಳನ್ನು ಅಳವಡಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸ್ಥಾಪಿಸಿರುವ ಈ ಸಂವೇದಕಗಳು ರಾಜಕಾಲುವೆಗಳಲ್ಲಿನ ನೀರಿನ ಮಟ್ಟದ ನೈಜ-ಸಮಯದ ನವೀಕರಣಗಳನ್ನು ಒದಗಿಸುತ್ತವೆ ಎಂದು ಪಾಲಿಕೆ ತಿಳಿಸಿದೆ.

ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಸಲಾಗಿದೆ. ಅದರಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೇ ಮಾಹಿತಿ ತಿಳಿಯಲಿದೆ. ಅವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್ (ಐಸಿಸಿಸಿ)ಗೆ ಮಾಹಿತಿ ರವಾನೆ ಮಾಡಲಿದ್ದಾರೆ.

Advertisements

“ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗೆ ಅನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಇದರಿಂದ ಪ್ರವಾಹದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಬಹುದಾಗಿದೆ” ಎಂದು ಮಾಹಿತಿ ನೀಡಿದೆ.

“ಬೆಂಗಳೂರಿನಲ್ಲಿ ಸುರಿವ ಮಳೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದಿದೆ.

ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್‌ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ತೊಳು ಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯಗಳ ತೆರೆವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ” ಎಂದು ಮಾಹಿತಿ ನೀಡಿದೆ.

860 ಕಿ.ಮೀ ಉದ್ದದ ರಾಜಕಾಲುವೆ

ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ ಉದ್ದದ ರಾಜಕಾಲುವೆಯಿದ್ದು, ಈ ಪೈಕಿ 581 ಕಿ.ಮೀ ಉದ್ದ ರಾಜಕಾಲುವೆಯನ್ನು ಆರ್‌ಸಿಸಿ ತಡೆಗೋಡೆಯಿಂದ ನಿರ್ಮಾಣ ಮಾಡಲಾಗಿದೆ. 199 ಕಿ.ಮೀ ಉದ್ದ ರಾಜಕಾಲುವೆಯ ಆರ್‌ಸಿಸಿ ತಡೆಗೋಡೆ ಕಾಮಗಾರಿಯು ಪ್ರಗತಿಯಲ್ಲಿದೆ. ಇನ್ನುಳಿದ 80 ಕಿ.ಮೀ ರಾಜಕಾಲುವೆಯು ಕಚ್ಚಾ ಡ್ರೈನ್ ಒಳಗೊಂಡಿರುತ್ತದೆ ಎಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆ ಅವಾಂತರ; ನೆಲಕ್ಕೊರಗಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

“ನಗರದಲ್ಲಿ ಪಕ್ಕಾ ಡ್ರೈನ್ 581 ಕಿ.ಮೀ ಉದ್ದದ ಆರ್‌ಸಿಸಿ ತಡೆಗೋಡೆ ನಿರ್ಮಿಸಿರುವ ರಾಜಕಾಲುವೆಯ ಭಾಗದಲ್ಲಿ ಹೂಳೆತ್ತುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಅದಲ್ಲದೆ ತೆಗೆಯುವಂತಹ ಹೂಳನ್ನು ಕೂಡಲೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ 74 ಕಡೆ ಪ್ರವಾಹ ಪೀಡಿತ ಪ್ರದೇಶಗಳಿದ್ದು, ಸದರಿ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X