ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
“ರಾಜ್ಯದ 223 ತಾಲೂಕುಗಳನ್ನು ಈಗಾಗಲೇ ಬರಪೀತ ತಾಲೂಕುಗಳೆಂದು ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಮುಂಗಾರು ವಿಳಂಬವಾಗಲಿದೆ. ಪ್ರಯುಕ್ತ ಈಗಾಗಲೇ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿರುತ್ತದೆ. ಮುಂದಿನ ಎರಡು ತಿಂಗಳವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅವಶ್ಯಕವಾಗಿರುತ್ತದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?
ಆದ್ದರಿಂದ, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಇಲಾಖಾ ಸಚಿವರಿಗೆ ಅನುಮತಿ ನೀಡಲು ಕೋರುತ್ತಾ ಸದರಿ ಸಭೆ ಹಾಗೂ ಸಭೆಯ ನಿರ್ಧಾರಗಳನ್ನು ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಲು ಕೋರುತ್ತಿರುವುದಾಗಿ ಅವರು ಮನವಿ ಮಾಡಿದ್ದಾರೆ.