ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು ಮುಂದುವರಿದಿದ್ದು, ಒಂದು ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಿಸಿದ್ದು, “ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ.ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ.
ಅಭಿನಂದನೆಗಳು. pic.twitter.com/tbGppfVWJv
— BJP Karnataka (@BJP4Karnataka) May 11, 2024
ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಜೆಡಿಎಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.
ಇದನ್ನು ಓದಿದ್ದೀರಾ? ಜಿಲ್ಲೆಗಳ ರಾಜಧಾನಿ ಹೆಸರೇಳಿ: ವ್ಯಾಪಕ ಟ್ರೋಲ್‌ಗೆ ಗುರಿಯಾದ ಪ್ರಧಾನಿ ಮೋದಿಯ ಚುನಾವಣಾ ಭಾಷಣ!
ಆರು ಸ್ಥಾನಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
