ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ನಿನ್ನೆ(ಮೇ 10) ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು, ಬಂಧಿಸಿದ್ದರು. ಬೆಳಗ್ಗೆ ಹೊಳೆನರಸೀಪುರಕ್ಕೆ ಕರೆದುಕೊಂಡು ಬಂದಿದ್ದ ಪೊಲೀಸರು, ದೇವರಾಜೇಗೌಡ ವಿಚಾರಣೆ ಮುಗಿಸಿ, ವೈದ್ಯಕೀಯ ಚಿಕಿತ್ಸೆಗೊಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿದ್ದೀರಾ? ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ
ಅರ್ಜಿಯ ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿ.ಜೆ, ಜೆಎಂಎಫ್ಸಿ ನ್ಯಾಯಾಧೀಶ ಸಿದ್ದರಾಮ.ಎಸ್, ಜಾಮೀನು ನೀಡಲು ನಿರಾಕರಿಸಿದ್ದಲ್ಲದೇ, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮೇ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
