ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಜೀವಂತ ದಹನವಾಗಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆಯ ಇಂಗಳಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮೃತನನ್ನಿ ಸಂಗನಗೌಡ ಗೌಡರ್(50) ಎಂದು ಗುರುತಿಸಲಾಗಿದೆ.
ಬಾಗಲಕೋಟೆಯಿಂದ ಚಿಕ್ಕಮಾಗಿ ಕಡೆಗೆ ಸಂಗನಗೌಡ ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.