ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

Date:

Advertisements

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ಪತ್ರಕರ್ತರು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಒಂದೇ ವೇದಿಕೆಯಲ್ಲಿ ಸಾರ್ವಜನಿಕ ಚರ್ಚೆಗೆ ಕರೆದಿದ್ದಾರೆ. ಈ ಚರ್ಚೆಯಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ಒಪ್ಪಿಕೊಂಡಿದ್ದು, “ಲೋಕಸಭೆ ಚುನಾವಣೆಯ ಸಾರ್ವಜನಿಕ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು 100% ಸಿದ್ಧ” ಎಂದು ಹೇಳಿದ್ದಾರೆ. ಇದೀಗ, ಮೋದಿ ಅವರ ಪ್ರತಿಕ್ರಿಯೆಗಾಗಿ ದೇಶ ಎದುರು ನೋಡುತ್ತಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮದನ್ ಲೋಕುರ್, ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಹಾಗೂ ಹಿರಿಯ ಪತ್ರಕರ್ತ, ‘ದಿ ಹಿಂದೂ’ ಮಾಜಿ ಸಂಪಾದಕ ಎನ್ ರಾಮ್ ಅವರು ಗುರುವಾರ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ಪಕ್ಷದವರು ಪ್ರಣಾಳಿಕೆಗಳ ಬಗ್ಗೆ ಮಾಡುತ್ತಿದ್ದಾರೆ. ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ, ಉತ್ತರಗಳು ದೊರೆಯುತ್ತಿಲ್ಲ. ದೇಶದ ಜನರು ಎರಡೂ ಕಡೆಯಿಂದ ಉತ್ತರವನ್ನು ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ, ಇಬ್ಬರಿಗೂ ಸಾರ್ವಜನಿಕ ಚರ್ಚೆಯಲ್ಲಿ ಭಾಗಿಯಾಗಲು ವೇದಿಕೆ ಸಿದ್ದಪಡಿಸುವುದಾಗಿ ಆಹ್ವಾನಿಸಿದ್ದಾರೆ.

ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಈ ಆಹ್ವಾನದ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ಪ್ರಶ್ನಿಸಲಾಗಿತ್ತು. ಅವರು ಆಹ್ವಾನವನ್ನು ಸ್ವಾಗತಿಸಿದ್ದಾರೆ. “ನಾನು ಅಥವಾ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯಲ್ಲಿ ಭಾಗವಹಿಸಲು ಸಂತೋಷ ಪಡುತ್ತೇವೆ. ಪ್ರಧಾನಿ ಮೋದಿ ಅವರು ಚರ್ಚೆಗೆ ಬರಲು ಒಪ್ಪಿದರೆ, ನಾವು ಖಂಡತಾ ಹೋಗುತ್ತೇವೆ. ಮೋದಿ ಒಪ್ಪಿದರೆ ಆ ಬಗ್ಗೆ ಸಂಘಟಕರು ನನಗೆ ತಿಳಿಸುವಂತೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

Advertisements

“ಇದು ಐತಿಹಾಸಿಕ ಚರ್ಚೆಯಾಗಲಿದೆ. ಚರ್ಚೆಯಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ. ಪ್ರಧಾನಿ ಈ ಸಂವಾದದಲ್ಲಿ ಭಾಗವಹಿಸುವುದನ್ನು ದೇಶವು ನಿರೀಕ್ಷಿಸುತ್ತದೆ” ಎಂದು ರಾಹುಲ್ ಹೇಳಿದ್ದಾರೆ.

“ನಿಮ್ಮ ಆಹ್ವಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿದ್ದೇನೆ. ಅಂತಹ ಚರ್ಚೆಯು ಜನರು ನಮ್ಮ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜನರಲ್ಲಿ ಅರಿವು ಮೂಡಿಸುತ್ತದೆ ಎಂಬುದನ್ನು ನಾವು ಒಪ್ಪುತ್ತೇವೆ. ಯಾವುದೇ ಆಧಾರರಹಿತ ಆರೋಪಗಳನ್ನು ತಳ್ಳಿಹಾಕುವುದು ಸಹ ಮುಖ್ಯವಾಗಿದೆ” ಎಂದು ರಾಹುಲ್ ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಹೋರಾಡುವ ಪ್ರಮುಖ ಪಕ್ಷಗಳಾಗಿ, ಸಾರ್ವಜನಿಕರು ತಮ್ಮ ನಾಯಕರನ್ನು ನೇರವಾಗಿ ಪ್ರಶ್ನಿಸುವ ಹಕ್ಕು ಹೊಂದಿದ್ದಾರೆ. ಅಂತಹ ಚರ್ಚೆಯಲ್ಲಿ ಭಾಗವಹಿಸಲು ನಾನು ಅಥವಾ ಕಾಂಗ್ರೆಸ್ ಅಧ್ಯಕ್ಷರು ಸಂತೋಷಪಡುತ್ತಾರೆ. ದಯವಿಟ್ಟು ಪ್ರಧಾನಿ ಒಪ್ಪಿದರೆ, ಚರ್ಚೆಯ ಸಮಯ ಮತ್ತು ಸ್ಥಳದ ಬಗ್ಗೆ ನಮಗೆ ಮಾಹಿತಿ ನೀಡಿ” ಎಂದು ಅವರು ಹೇಳಿದ್ದಾರೆ.

ಅಂದಹಾಗೆ, ಅಮೆರಿಕದಲ್ಲಿ 1947ರಿಂದ ಅಧ್ಯಕ್ಷ ಸ್ಥಾನದ ಸ್ಪರ್ಧಿಗಳ ನಡುವೆ ಸಾರ್ವಜನಿಕ ಚರ್ಚೆಗಳು ನಡೆಯುತ್ತಲೇ ಬಂದಿವೆ. ಇಂತಹ ಚರ್ಚೆಗಳು ಅಮೆರಿಕಾದ ರಾಜಕೀಯ ಭೂದೃಶ್ಯ ಮತ್ತು ವಿವಿಧ ವಿಷಯಗಳ ಬಗ್ಗೆ ಅಭ್ಯರ್ಥಿಗಳ ನಿಲುವನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ. ಜೊತೆಗೆ, ಮತದಾರರು ತಮ್ಮ ಮತ ಯಾರಿಗೆ ಎಂಬುದನ್ನು ನಿರ್ಣಯಿಸಲು ಸಾಧ್ಯವಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X