ಬೆಂಗಳೂರು | ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮರ ಕಟಾವು ತಂಡಗಳು

Date:

Advertisements

ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ.

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ ಮರ ಕಟಾವು ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ” ಎಂದು ಪಾಲಿಕೆ ತಿಳಿಸಿದೆ.

ಪಾಲಿಕೆಯ ನಿಯಂತ್ರಣ ಕೊಠಡಿಗಳಿಗೆ ಮರ, ಮರದ ರೆಂಬೆ/ಕೊಂಬೆಗಳು ಬಿದ್ದಂತಹ ದೂರುಗಳು ಬಂದ ಕೂಡಲೇ ಆ ದೂರುಗಳನ್ನು ಆಯಾ ವಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಿದ್ದಾರೆ. ಅನಂತರ ಅಧಿಕಾರಿಗಳು ಮರ, ಮರದ ರೆಂಬೆ/ಕೊಂಬೆ ಬಿದ್ದಿರುವ ಸ್ಥಳಕ್ಕೆ ಮರ ಕಟಾವು ತಂಡಗಳನ್ನು ಕಳುಹಿಸಿ ಧರೆಗುರುಳಿದ ಮರಗಳನ್ನು ಕಟಾವು ಮಾಡಿ ನಾಗರಿಕರು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.

Advertisements

ಪಾಲಿಕೆ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಮರ ಕಟಾವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದರ ಜತೆಗೆ ತುರ್ತಾಗಿ ಮರಗಳನ್ನು ತೆರವುಗೊಳಿಸುವ ಸಲುವಾಗಿ ಹೆಚ್ಚುವರಿಯಾಗಿ 11 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ. ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರೆ ಸಲಕರಣೆಗಳಿರಲಿವೆ. ಜೊತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗಾಗಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಮಳೆಗಾಲದಲ್ಲಿ ಬಿದ್ದಂತಹ ಮರಗಳನ್ನು ತೆರವುಗೊಳಿಸುವ ಸಲುವಾಗಿ ಈ ಬಾರಿ ವಿನೂತನವಾಗಿ 5 ಬೈಕ್(ದ್ವಿಚಕ್ರ ತಂಡ) ತಂಡಗಳನ್ನು ನಿಯೋಜಿಸಿಕೊಳ್ಳಲಾಗಿದೆ. ಅದರಂತೆ ರಸ್ತೆ ಮೇಲೆ ಬಿದ್ದಂತಹ ಅಥವಾ ತುರ್ತಾಗಿ ಮರಗಳನ್ನು ತೆಗೆಯಬೇಕಾದ ಸ್ಥಳಗಳಿಗೆ ಬೈಕ್ ತಂಡಗಳು ಕೊಂಬೆ ಕಟಾವು ಯಂತ್ರವನ್ನು ತೆಗೆದುಕೊಂಡು ಸ್ಥಳಕ್ಕೆ ತೆರಳಿ ಮರವನ್ನು ಕಟಾವು ಮಾಡಿ ತೆರವುಗೊಳಿಸಲಿದ್ದಾರೆ.

ಮಳೆಗಾಲದ ವೇಳೆ ಬೃಹತ್ ಮರಗಳು ಬಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ ಪಾಲಿಕೆ ಅರಣ್ಯ ವಿಭಾಗವು 2 ಕ್ರೇನ್ ಹಾಗೂ 2 ಜೆಸಿಬಿಗಳನ್ನು ನಿಯೋಜನೆ ಮಾಡಿಕೊಂಡಿದೆ. ಅಲ್ಲದೆ, ಅದನ್ನು ಸಾಗಾಣೆ ಮಾಡುವ ಸಲುವಾಗಿ 8 ಟ್ರ‍್ಯಾಕ್ಟರ್‌ಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಎಎಸ್‌ ಅಧಿಕಾರಿಯ ಪತ್ನಿ ಅನುಮಾನಾಸ್ಪದ ಸಾವು

ಧರೆಗುಳಿದ ಮರಗಳನ್ನು ಕಟಾವು ಮಾಡಿದ ನಂತರ ಮರದ ದಿಮ್ಮಿಗಳು, ರೆಂಬೆ, ಕೊಂಬೆಗಳ ವಿಲೇವಾರಿಗಾಗಿ ವಲಯಕ್ಕೆ ಒಂದರಂತೆ ಆಯಾ ವಲಯಗಳಲ್ಲಿ 8 ಡಂಪಿಂಗ್ ಯಾರ್ಡ್‌ಗಳಿದ್ದು, ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ 6 ಕಡೆ ಡಂಪಿಂಗ್ ಯಾರ್ಡ್‌ಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಮರದ ದಿಮ್ಮಿ, ರೆಂಬೆ, ಕೊಂಬೆಗಳನ್ನು ವಿಲೇವಾರಿ ಮಾಡಲಾಗುತ್ತದೆ.

ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಮೇ 6 ರಿಂದ ಮೇ 10 ರವರೆಗೆ 271 ಮರ ಹಾಗೂ 483 ರೆಂಬೆ, ಕೊಂಬೆಗಳು ಧರೆಗುರುಳಿದಿವೆ. ಮರ ಕಟಾವು ತಂಡಗಳ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಗರಿಕರಿಂದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X