ಕನ್ನಡ, ತೆಲುಗು ಕಿರುತರೆ ನಟಿ ಪವಿತ್ರಾ ಜಯರಾಮ್ ರಸ್ತೆ ಅಪಘಾತದಲ್ಲಿ ನಿಧನ

Date:

Advertisements

ಕನ್ನಡ ಹಾಗೂ ತೆಲುಗು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ನಟಿ ಪವಿತ್ರಾ ಜಯರಾಮ್‌ (35) ಅವರು ಆಂಧ್ರ ಪ್ರದೇಶದ ಮಹೆಬೂಬ್‌ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ತ್ರಿನಯಿನಿ ಧಾರಾವಾಹಿ ಮೂಲಕವೇ ಗುರುತಿಸಿಕೊಂಡಿದ್ದ ಪವಿತ್ರಾ, ಭಾನುವಾರ ಬೆಳಗ್ಗೆ ಆಂಧ್ರ ಪ್ರದೇಶದ  ಮೆಹಬೂಬ ನಗರದ ಬಳಿಯ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೆಲುಗಿನ ತ್ರಿನಯಿನಿ ಧಾರಾವಾಹಿಯಿಂದಲೇ ಹೆಚ್ಚು ಜನಪ್ರಿಯತೆ ಹೊಂದಿದ್ದ ಪವಿತ್ರಾ ಅವರು ಮೂಲತಃ ಕರ್ನಾಟಕದ ಮಂಡ್ಯ ತಾಲೂಕಿನ ಹನಕೆರೆಯವರು.

ಆಂಧ್ರದ ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ (ಬಿ) ಗ್ರಾಮದ ಬಳಿ, ಪವಿತ್ರಾ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಹೈದರಾಬಾದ್‌ನಿಂದ ವನಪರ್ತಿಗೆ ಬರುತ್ತಿದ್ದ ಬಸ್ ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪವಿತ್ರಾ ಜಯರಾಮ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯದ ಹನಕೆರೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಪಕ್ಷವೊಂದರ ಬಗ್ಗೆ ಪ್ರಚಾರದ ನಕಲಿ ವಿಡಿಯೋ: ಪ್ರಕರಣ ದಾಖಲಿಸಿದ ಅಮೀರ್ ಖಾನ್

ಘಟನೆಯಲ್ಲಿ ಪವಿತ್ರಾ ಜಯರಾಮ್ ಅವರ ಸೋದರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಪವಿತ್ರಾ ಜಯರಾಮ್‌ ತೆಲುಗಿನಿ ತ್ರಿನಯನಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಕನ್ನಡಕ್ಕೆ ಡಬ್‌ ಆಗಿ ಜೀ ಕನ್ನಡದಲ್ಲೂ ಪ್ರಸಾರ ಕಂಡಿತ್ತು. ಈ ಧಾರಾವಾಹಿಗೂ ಮುನ್ನ ಕನ್ನಡದ ಕೆಲವು ಧಾರಾವಾಹಿಗಳಲ್ಲೂ ಪವಿತ್ರ ನಟಿಸಿದ್ದರು. ಜೋಕಾಲಿ, ರೋಬೋ ಫ್ಯಾಮಿಲಿ, ರಾಧಾ ರಮಣ, ನೀಲಿ ಧಾರಾವಾಹಿಯಲ್ಲೂ ನಟಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X