ಪ್ರಜ್ವಲ್‌ ಪೆನ್‌ ಡ್ರೈವ್ ಪ್ರಕರಣ | ಎಸ್‌ಐಟಿ ಬಲೆಗೆ ಬೀಳುತ್ತಿರುವ ಬಿಜೆಪಿ ನಾಯಕರ ಆಪ್ತರು

Date:

Advertisements

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್​ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ ದಿನೇ ದಿನೆ ಹೊಸ ತಿರುವು ಪಡೆಯುತ್ತಿದ್ದು, ಪ್ರಕರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕರ ಆಪ್ತರೇ ಬಂಧನವಾಗುತ್ತಿದ್ದಾರೆ.

ಪೆನ್‌ ಡ್ರೈವ್ ಪ್ರಕರಣ ಬೆಳಕಿಗೆ ಬರುವ ಮುನ್ನವೇ ಏಪ್ರಿಲ್ 21 ರಂದು ಪ್ರೀತಂಗೌಡ ಆಪ್ತ ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್​ ನಾಯಕರು ದೂರು ನೀಡಿದ್ದರು.‌ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಯಿತು.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿದ ಮೇಲೆ ಪೆನ್‌ ಡ್ರೈವ್‌ ಪ್ರಕರಣ ನಿಧಾನವಾಗಿ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಂಡಿದೆ. ತನಿಖೆಯ ಆರಂಭಿಕವಾಗಿಯೇ ಪ್ರೀತಂಗೌಡರ ಕೆಲ ಆಪ್ತರನ್ನು ಬಂಧಿಸಿದೆ. ಪೆನ್‌ ಡ್ರೈವ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಎಸ್​ಐಟಿ ಭಾನುವಾರ (ಮೇ 12) ರಂದು ಪ್ರೀತಂಗೌಡರ ಮತ್ತಿಬ್ಬರು ಆಪ್ತರನ್ನು ಬಂಧಿಸಿದೆ.

Advertisements

ಬಂಧನಕ್ಕೊಳಗಾಗಿರುವ ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿಯ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಪೆನ್‌ ಡ್ರೈವ್‌ ಪ್ರಕರಣವನ್ನು ರಾಜಕೀಯಗೊಳಿಸಿ ಮಾತನಾಡುತ್ತಿದ್ದ ಬಿಜೆಪಿ ನಾಯಕರಿಗೆ ಈಗ ಪದೇ ಪದೆ ಮುಜುಗರವಾಗುತ್ತಿದೆ. ಇದು ಕಮಲ ನಾಯಕರಿಗೆ ಆಘಾತ ತಂದಿದ್ದು, ಇನ್ನಷ್ಟು ನಿದ್ದೆಗೆಡುವಂತೆ ಮಾಡಿದೆ.

ಬಿಜೆಪಿಯ ದೇವರಾಜೇಗೌಡರಿಗೆ ತಪ್ಪಿಲ್ಲ ಸಂಕಷ್ಟ

ಪೆನ್‌ ಡ್ರೈವ್‌ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸಿ, ರಾಜ್ಯ ಸರ್ಕಾರ ಮತ್ತು ಎಸ್‌ಐಟಿ ಮೇಲೆ ಗೂಬೆ ಕೂರಿಸುವ ಕೆಲಸಕ್ಕೆ ಮುಂದಾಗಿದ್ದ ಬಿಜೆಪಿ ನಾಯಕ ಮತ್ತು ವಕೀಲ ದೇವರಾಜೇಗೌಡರಿಗೆ ಪೆನ್‌ ಡ್ರೈವ್‌ ಪ್ರಕರಣ ಉರುಳಾಗುವ ಸಾಧ್ಯತೆ ಇದೆ.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೆ ವಿಚಾರಣೆಗೆ ಹಾಜರಾಗದೆ ಕರ್ನಾಟಕ ಬಿಟ್ಟು ಹೊರಟಿದ್ದ ದೇವರಾಜೇಗೌಡರನ್ನು ಹೊಳೆನರಸೀಪುರ ಪೊಲೀಸರು ಆರೆಸ್ಟ್ ಮಾಡಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್ ಕೇಸ್ ಸಂಬಂಧ ತನಿಖೆಗೆ ವಕೀಲ ದೇವರಾಜೇಗೌಡರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಎಸ್ಐಟಿ ಕೇಳುವ ಸಾಧ್ಯತೆ ಇದ್ದು, ಇದಕ್ಕಾಗಿ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಕೇಳಬಹುದು. ತನಿಖೆ ವೇಳೆ ಒಂದು ಮೊಬೈಲ್, ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ದೇವರಾಜೇಗೌಡರ ವಿಚಾರಣೆ ಅಗತ್ಯವಿದೆ.

ನವೀನ್ ಗೌಡ, ಪುಟ್ಟರಾಜುಗಾಗಿ ಹುಡುಕಾಟ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದ್ದು, ನವೀನ್ ಗೌಡ ಹಾಗೂ ಪುಟ್ಟರಾಜುಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X