ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Date:

Advertisements

ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್‌ಡಿಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ” ಎಂದಿದ್ದ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹೇಳಿಕೆಗೆ ಬೆಂಗಳೂರಿನಲ್ಲಿ ಸೋಮವಾರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

“ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ” ಎಂದರು.

Advertisements

ರಾಜಕೀಯ ಧ್ರುವೀಕರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ.ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ” ಎಂದರು.

“ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X