ಜೂನ್ ಮೊದಲ ವಾರದಲ್ಲೇ ಏಕನಾಥ್‌ ಶಿಂದೆ ಸರ್ಕಾರ ಪತನ: ಎಂ ಬಿ ಪಾಟೀಲ್‌

Date:

Advertisements

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ‌ ಕಿಡಿಕಾರಿದರು.

ಸೋಮವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ” ಎಂದು ಭವಿಷ್ಯ ನುಡಿದರು.

“ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು” ವಿವರಿಸಿದರು.

Advertisements

“ಏಕನಾಥ್‌ ಶಿಂದೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X