ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಬ್ಬಿಣದ ಹೋರ್ಡಿಂಗ್‌ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ ಈವರೆಗೆ ಎಂಟು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಈ ಹಿಂದೆ ಮೇ 13ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು. ವಿವಿಧ ಭಾಗಗಳಲ್ಲಿ ನಡೆದ ಕೆಲವು ದುರಂತ ಘಟನೆಗಳಿಗೆ ಸಂಬಂಧಿಸಿ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.
Mumbai walon theek ho ?
This is scary 😧 pic.twitter.com/EJs2kB9c5z— MrsG (@Marvellous_MrsG) May 13, 2024
ಕಬ್ಬಿಣದ ಹೋರ್ಡಿಂಗ್‌ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಘಟನೆ ಘಾಟ್ಕೋಪರ್ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಪಾಂತ್ನಾಗರ್‌ನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ ಈ ಘಟನೆ ನಡೆದಿದೆ. ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಮಾಹಿತಿ ನೀಡಿರುವ ಬಿಎಂಸಿ ಕಮಿಷನರ್ ಭೂಷಣ್ ಗಗ್ರಾನಿ, “ಘಾಟ್ಕೋಪರ್ ಹೋರ್ಡಿಂಗ್ ಕುಸಿತ ಘಟನೆಯಲ್ಲಿ ಇನ್ನೂ 20-30 ಜನರು ಸಿಲುಕಿರುವ ಶಂಕೆ ಇದೆ. ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ತೆಂಗಿನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೇಘವಾಡಿ ನಾಕಾದಲ್ಲಿ ನಡೆದಿದೆ. ಕೂಡಲೇ ಸ್ಥಳೀಯರು ಆಟೋ ಚಾಲಕ ಹಯಾತ್ ಖಾನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
STORY | Flight operations hit, 35 injured in billboard collapse after rains in Mumbai
READ: https://t.co/JbauaQioN5
VIDEO | Here’s what Maharashtra CM Eknath Shinde (@mieknathshinde) said after visiting the site where a billboard collapsed in Ghatkopar, Mumbai earlier today.… pic.twitter.com/wTKezmvO0a
— Press Trust of India (@PTI_News) May 13, 2024
ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ.
ಥಾಣೆ, ಅಂಬರ್ ನಾಥ್, ಬದ್ಲಾಪುರ್, ಕಲ್ಯಾಣ್ ಮತ್ತು ಉಲ್ಲಾಸ್‌ನಗರದಲ್ಲಿಯೂ ಸಹ ಬಿರುಸಿನ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ. ಮುಂಬೈನ ಅಲಲ್ಲಿ ಮುಂದಿನ 3-4 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿರುಗಾಳಿ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ15 ವಿಮಾನಗಳ ಮಾರ್ಗವನ್ನು ಬದಲಿಸಲಾಯಿತು. ಸಂಜೆ 5-30 ರಿಂದ ಮತ್ತೆ ವಿಮಾನ ಹಾರಾಟ ಆರಂಭವಾಗಿದೆ ಎಂದು ವರದಿಯಾಗಿದೆ.
#BREAKING | Heavy rain with gusty winds batter Mumbai: Giant billboard collapses in Ghatkopar. More than 50 injured, over 60 feared trapped | CAUGHT ON CAM pic.twitter.com/37Mag25k7m
— Puneet Goyal (@goyalpuneet11) May 13, 2024
ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 66 ನಿಮಿಷಗಳ ಕಾಲ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ವಿಮಾನ ನಿಲ್ದಾಣ ನಿರ್ವಾಹಕರು ಮಾಹಿತಿ ನೀಡಿದ್ದಾರೆ.
ಭಾರೀ ಮಳೆ, ಗಾಳಿಗೆ ತಂತಿಯ ಮೇಲೆ ಬ್ಯಾನರ್ ಬಿದ್ದ ನಂತರ ಆರೆ ಮತ್ತು ಅಂಧೇರಿ ಪೂರ್ವ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೆಟ್ರೋ ರೈಲಿನ ವಕ್ತಾರರು ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಕಲ್ವಾ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಇದಲ್ಲದೇ ಕೆಲವೆಡೆ ಮರಗಳು ಉರುಳಿದ ಘಟನೆಯೂ ವರದಿಯಾಗಿದೆ.
#WATCH | Maharashtra | One NDRF team has been deployed at Ghatkopar.
54 people injured and over 100 feared trapped after a hoarding fell at the Police Ground Petrol Pump, Eastern Express Highway, Pantnagar, Ghatkopar East. Search and rescue is in process: BMC
(Video Source:… https://t.co/HxamZmFmrZ pic.twitter.com/AOd54SaYMw
— ANI (@ANI) May 13, 2024
