ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುಶೀಲ್ ಮೋದಿ ಅವರು ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
“ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮಾಜಿ ರಾಜ್ಯಸಭಾ ಸಂಸದರಾದ ಸುಶೀಲ್ ಕುಮಾರ್ ಮೋದಿ ಜಿ ಅವರ ನಿಧನಕ್ಕೆ ಶ್ರದ್ಧಾಂಜಲಿಗಳು. ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟ” ಎಂದು ಬಿಜೆಪಿ ಬಿಹಾರದ ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಟ್ವೀಟ್ ಮಾಡಿದ್ದಾರೆ.
बिहार के पूर्व उप मुख्यमंत्री व पूर्व राज्यसभा सांसद श्री सुशील कुमार मोदी जी के निधन पर उन्हें भावभीनी श्रद्धांजलि।
यह बिहार भाजपा के लिए अपूरणीय क्षति है।
ॐ शांति शांति pic.twitter.com/IEyMeH2Htt— Samrat Choudhary (Modi Ka Parivar) (@samrat4bjp) May 13, 2024
ಸುಶೀಲ್ ಮೋದಿ ಅವರು ಸುಮಾರು 11 ವರ್ಷ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೊತೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಅನಾರೋಗ್ಯದ ಹೊರತಾಗಿಯೂ ಬಿಜೆಪಿ ಸುಶೀಲ್ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸೇರಿಸಲಾಗಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕ್ರಮವಾಗಿ ಸಂಚಾಲಕ ಮತ್ತು ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ರಾಜಕೀಯದಿಂದ ದೂರ ಉಳಿಯಲು ಸುಶೀಲ್ ಮೋದಿ ನಿರ್ಧರಿಸಿದ್ದರು. ಅನಾರೋಗ್ಯ ಕಾರಣದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾರ್ಚ್ನಲ್ಲಿ ತಿಳಿಸಿದ್ದರು.
ರಾಜ್ಯಸಭೆಯ ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ತಿಳಿದು ಬಂದಿದೆ.
