ಬೆಂಗಳೂರು | ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ

Date:

Advertisements

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಮೇ 14ರಂದು ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್​ ಪರಿಶೀಲಿಸಿದಾಗ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು.

ಈ ಬಗ್ಗೆ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದಾರೆ. ಈ ಬಳಿಕ, ಹುಸಿ ಬಾಂಬ್ ಇ-ಮೇಲ್ ಎಂದು ಧೃಢವಾಗಿದೆ.

Advertisements

ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿದ್ದವು. ಈ ಬಾಂಬ್​ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಪತ್ತು ನಿರ್ವಹಣೆಗಾಗಿ ತಂಡಗಳ ನಿಯೋಜನೆ: ತುಷಾರ್ ಗಿರಿ ನಾಥ್

ಇತ್ತೀಚೆಗೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X