ಚಿಕ್ಕಬಳ್ಳಾಪುರ | ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ನ್ಯಾ ಎ ಅರುಣ ಕುಮಾರಿ

Date:

Advertisements

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ವ್ಯಕ್ತಿಯು ಕಾನೂನಿನ ನೆರವು ಪಡೆದುಕೊಂಡಾಗ ಉತ್ತಮ ಜೀವನ ನಡೆಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರುಣಾ ಕುಮಾರಿ ಹೇಳಿದರು.

ತಾಲೂಕಿನ ಬಿಜಿಎಸ್ ವಿದ್ಯಾನಿಕೇತನ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೆಂಪೇಗೌಡ ಕಾನೂನು ಮಹಾವಿದ್ಯಾಲಯ, ಜಿಲ್ಲಾ ವಕೀಲರ ಸಂಘ, ಗೌತಮ ಬುದ್ಧ ಪೌಂಡೇಶನ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕಾನೂನು ಎಲ್ಲರಿಗೂ ಒಂದೇ. ಹೀಗಾಗಿ ಪ್ರತಿಯೊಬ್ಬರು ತಮ್ಮ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸಿದರೆ ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸುವುದಿಲ್ಲ” ಎಂದು ಹೇಳಿದರು.

Advertisements

“ಕಾನೂನು ವಿಷಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚು ಶ್ರದ್ಧೆ ವಹಿಸಬೇಕು. ತಮ್ಮ ಮೇಲೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಯಶಸ್ಸನ್ನು ಸುಲಭವಾಗಿ ಪಡೆಯಬಾರದು. ಸತತ ಪ್ರಯತ್ನದ ಮೂಲಕ ಯಶಸ್ಸನ್ನು ಪಡೆದುಕೊಂಡಾಗ ಜೀವನದಲ್ಲಿ ಯಶಸ್ಸು ಹೊಂದಬಹುದು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕೆಂಪೇಗೌಡ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಬಿ ಜಿ ಶೋಭಾ ಮಾತನಾಡಿ, “ವಿದ್ಯಾರ್ಥಿಗಳು ಶಿಕ್ಷಣ ಕಲಿಕೆಗೆ ಸೀಮಿತವಾಗದೇ, ಸಮಾಜಮುಖಿ ಚಿಂತನೆ ಮಾಡಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಿಡಿಲು ಬಡಿದು ಎರಡು ಎತ್ತುಗಳು ಸಾವು

ವಿವೇಕಾನಂದ ಪಂಡಿತ್, ಸಿಜೆಎಂ ಬಾಲಪ್ಪ ಅಪ್ಪಣ್ಣ ಜರುಗು, ಮೊದಲನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಲಾವಣ್ಯ, ಉಪವಿಭಾಗಧಿಕಾರಿ ಡಿ ಎಚ್ ಅಶ್ವಿನ್, ತಹಶೀಲ್ದಾರ್ ಅನಿಲ್‍ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್ ಎಂ ಮುರಳಿಮೋಹನ್, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಎನ್ ಚನ್ನಪ್ಪರೆಡ್ಡಿ, ಖಜಾಂಚಿ ಬಿ ಕೆ ಮಂಜುನಾಥ್, ಮಂಚನಬಲೆ ಪಿಡಿಒ ರಾಮಕೃಷ್ಣ, ಗ್ರಾಪಂ ಅಧ್ಯಕ್ಷ ಶ್ರೀಧರ್, ಗೌತಮ ಬುದ್ದ ಫೌಂಡೇಶನ್ ಅಧ್ಯಕ್ಷ ಗಂಗರಾಜು, ಕೆಂಪೇಗೌಡ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X