ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಿಕ್ರಮ್ ನಾಥ್ ಹಾಗೂ ಎಸ್ ಸಿ ಶರ್ಮಾ ಅವರಿದ್ದ ಪೀಠವು ಇದಕ್ಕಾಗಿ ಸಮಸ್ಯೆಗಳನ್ನು ಬಗೆಹರಿಸುವ ನೇಮಿಸಲಾದ ಸಂಸ್ಥೆಯನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ತಿಳಿಸಿತು.
“ನೀವು ಅಧಿಕಾರಿಗಳನ್ನು ಸಂಪರ್ಕಿಸಿದ್ದೀರಾ? ನೀವು ಇದಕ್ಕಾಗಿ ಸಂಬಂಧಿಸಿದ ಸಂಸ್ಥೆಯನ್ನು ಮೊದಲು ಸಂಪರ್ಕಿಸಿ” ಎಂದು ಪೀಠ ತಿಳಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?
ಅರ್ಜಿದಾರರು ತಮ್ಮ ಅರ್ಜಿಯನ್ನು ವಾಪಸ್ ಪಡೆದ ನಂತರ ಅರ್ಜಿಯನ್ನು ವಜಾಗೊಳಿಸಲಾಯಿತು.
ಜನಪ್ರತಿನಿಧಿಗಳ ಕಾಯ್ದೆಯಡಿ 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನರ್ಹತೆಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಫಾತಿಮಾ ಎಂಬ ಅರ್ಜಿದಾರರು ಆನಂದ್ ಎಸ್ ಜೋದಾಳೆ ಎಂಬ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.
