ಲೈಂಗಿಕ ದೌರ್ಜನ್ಯ ಪ್ರಕರಣ | ಮತ್ತೆ ವಿಮಾನ ಟಿಕೆಟ್ ರದ್ದು; ಪ್ರಜ್ವಲ್ ರೇವಣ್ಣರಿಂದ ಕಣ್ಣಾಮುಚ್ಚಾಲೆ ಆಟ

Date:

Advertisements

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ   ಮುಂದುವರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ ಅನ್ನು ರದ್ದುಪಡಿಸಿಕೊಂಡಿದ್ದಾರೆ. ಹೀಗಾಗಿ ಇಂದೂ ಸಹ ಬೆಂಗಳೂರಿಗೆ ಬರುವುದು ಅನುಮಾನವಾಗಿದೆ.

ತಂದೆ ಮತ್ತು ಶಾಸಕ ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಪ್ರಜ್ವಲ್‌ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.

Advertisements

ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ಪ್ರಜ್ವಲ್‌ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಇದರ ಅರ್ಥ ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.

ಎಸ್‌ಐಟಿ ಕಣ್ಣು

ಪ್ರಜ್ವಲ್ ರೇವಣ್ಣ ಚಲನ ವಲನಗಳ ಮೇಲೆ ಎಸ್ಐಟಿ ತಂಡ ನಿಗಾ ಇಟ್ಟಿದೆ. ಬೇರೆ ವಿಮಾನದಲ್ಲಿ ಟಿಕೆಟ್ ಬುಕ್ ಆಗುತ್ತದೆಯೇ, ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್​ಐಟಿ ತಂಡ ಬೀಡುಬಿಟ್ಟಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

ಚಿತ್ರದುರ್ಗ | ಜಾನುವಾರು, ಮಹಿಳೆ ಮೇಲೆ ದಾಳಿ ನೆಡೆಸಿದ ಚಿರತೆ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು...

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ

ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ...

Download Eedina App Android / iOS

X