ಲಂಡನ್‌ನ ಬರ್ಂಟ್ ಓಕ್‌ನಲ್ಲಿ 66 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯನ್ನು 22 ವರ್ಷದ ಯುವಕನೊಬ್ಬ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಮೃತ ಮಹಿಳೆಯನ್ನು ಅನಿತಾ ಮುಖಿ ಎಂದು ಗುರುತಿಸಲಾಗಿದೆ. ಯುವಕ ಆಕೆ ಬ್ಯಾಗ್‌ಅನ್ನು ಕಸಿದುಕೊಳ್ಳಲು ಯತ್ನಿಸಿದ್ದು, ಆಕೆ ಬ್ಯಾಗ್‌ಅನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ, ಆರೋಪಿ ಯುವಕ ಅನಿತಾಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿ ವೈದ್ಯಕೀಯ ಕಾರ್ಯದರ್ಶಿಯಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಅನಿತಾ ಮುಖೆ ಬರ್ಂಟ್ ಓಕ್ ಬ್ರಾಡ್‌ವೇ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆಗ, ಅಕೆಯಿಂದ ಯುವಕ ಬ್ಯಾಗ್ ಕಸಿದುಕೊಳ್ಳಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕಿತ ಜಲಾಲ್ ಡೆಬೆಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.