ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಎಂಬಲ್ಲಿ ಬಸ್-ಲಾರಿ ಡಿಕ್ಕಿ ಹೊಡೆದಿದ್ದು, ನಾಲ್ವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಓವರ್ ಟೇಕ್ ಮಾಡಲು ಮುಂದಾದ ಬಸ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
#WATCH | Tamil Nadu: Four people died and more than 15 were injured after a bus collided with a lorry in Maduranthakam on the Chennai-Trichy National Highway as it lost control while trying to overtake. The injured have been taken to Chengalpattu Government Hospital. More details… pic.twitter.com/J7S4W4NXQv
— ANI (@ANI) May 16, 2024
ಇನ್ನು ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬೆಟ್ಮಾ ಬಳಿ ಇಂದೋರ್-ಅಹಮದಾಬಾದ್ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಸ್‌ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಎಂಟು ಜನರು ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ
ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಗುನಾಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಾಲ್ಕು ಲೇನ್ ಹೆದ್ದಾರಿಯಲ್ಲಿ ಎಸ್‌ಯುವಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.