ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್ ಜೆರ್ಸಿಯಲ್ಲಿ ‘ನಂದಿನಿ’ ಲಾಂಛನ; ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಮಹತ್ವದ ಹೆಜ್ಜೆ: ಸಿಎಂ

Date:

Advertisements

ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ. ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ” ಎಂದು ಬಣ್ಣಿಸಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ” ಎಂದು ಹೇಳಿದ್ದಾರೆ.

Advertisements

“ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೆರ್ಸಿಯ ಬಲ ತೋಳಿನಲ್ಲಿ ನಂದಿನಿ ಲಾಂಛನವನ್ನು ಹಾಕಲಾಗಿದೆ. ನಂದಿನಿ ಎಂದು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಬರೆಯಲಾಗಿದೆ.

“ಟಿ–20 ಅಭಿಯಾನದಲ್ಲಿ ಸ್ಕಾಟ್ಲೆಂಡ್‌ ಜೊತೆ ಪಾಲುದಾರಿಕೆ ಹೊಂದಿದ್ದು ನಮಗೆ ಸಂತೋಷವಾಗಿದೆ. ನಂದಿನಿಯು ಒಂದು ಬ್ರಾಂಡ್ ಆಗಿ ಶ್ರೇಷ್ಠತೆ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಕಳೆದ ನಲವತ್ತು ವರ್ಷಗಳಲ್ಲಿ ನಾವು ಜಾಗತಿಕ ಬ್ರಾಂಡ್ ಆಗಿ ಬೆಳೆದಿದ್ದೇವೆ” ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಅವರ ಹೇಳಿಕೆಯನ್ನು ಕ್ರಿಕೆಟ್ ಸ್ಕಾಟ್ಲೆಂಡ್‌ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

“ನಂದಿನಿ ಜೊತೆ ಪಾಲುದಾರರಾಗಿದ್ದು ನಮಗೆ ಸಂತೋಷ ಉಂಟು ಮಾಡಿದೆ. ನಮ್ಮ ಪುರುಷರ ಕ್ರಿಕೆಟ್ ತಂಡಕ್ಕೆ ಸ್ಥಾಪಿತವಾದ ಬ್ರ್ಯಾಂಡ್‌ ಬೆಂಬಲ ನೀಡುತ್ತಿರುವುದೇ ಅದ್ಭುತ. ಅವರ ಬ್ರ್ಯಾಂಡ್‌ ಹಾಗೂ ಸ್ಕಾಟ್ಲೆಂಡ್‌ ಕ್ರಿಕೆಟ್‌ ಅನ್ನು ಪ್ರಚಾರ ಪಡಿಸಲು ನಂದಿನಿ ಜೊತೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ. ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌, ನಮೀಬಿಯಾ, ಒಮಾನ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಆಡುವಾಗ ನಂದಿನಿ ಲಾಂಛನ ಜೊತೆಗೆ ಹೆಮ್ಮೆಯ ಸ್ಕಾಟ್ಲೆಂಡ್‌ ಬಣ್ಣಗಳೂ ಇರಲಿವೆ” ಎಂದು ಕ್ರಿಕೆಟ್ ಸ್ಕಾಟ್ಲೆಂಡ್‌ನ ವಾಣಿಜ್ಯ ಕಾರ್ಯನಿರ್ವಾಹಕ ಕ್ಲಾರ್‌ ಡ್ರುಮಂಡ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X