ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿಯಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರ್ಧಾರ

Date:

Advertisements

ದೇವೇಗೌಡರು ಮೇ 18 ರಂದು ಜನ್ಮದಿನ ಆಚರಿಸಿಕೊಳ್ಳುತ್ತಾರೆ. 2024ರ ಮೇ 18ಕ್ಕೆ ಅವರು 92ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ಇಳಿವಯಸ್ಸಿನಲ್ಲೂ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೂಡ ನಡೆಸಿದ್ದರು.

ಆದರೆ, ಈಗ ಮೊಮ್ಮಗ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಮತ್ತು ಮಗ ಎಚ್ ಡಿ ರೇವಣ್ಣ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡು ಕುಟುಂಬದಲ್ಲಿ ದೊಡ್ಡ ಕೋಲಾಹಲವೇ ಏರ್ಪಟ್ಟಿದೆ. ಇಂತಹ ಸಂದರ್ಭದಲ್ಲಿ ಹುಟ್ಟುಹಬ್ಬದ ಸಂಭ್ರಮ ಆಚರಿಸುವ ಮನಸ್ಸು ದೇವೇಗೌಡರು ಮಾಡಿಲ್ಲ. ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರೂ ಮನೆ ಹತ್ತಿರ ಬರಬೇಡಿ ಎಂದು ದೇವೇಗೌಡರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ, “ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ. ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? 300ಕ್ಕೂ ಹೆಚ್ಚು ಸ್ಥಾನ ಗೆದ್ದು ‘ಇಂಡಿಯಾ ಮೈತ್ರಿಕೂಟ’ ಸರ್ಕಾರ ರಚಿಸಲಿದೆ: ಲಕ್ನೋದಲ್ಲಿ ಡಿಸಿಎಂ ಡಿಕೆಶಿ ವಿಶ್ವಾಸ

ಮೊಮ್ಮಗನ ಕೇಸ್ ಹೊರಬಿದ್ದ ಬಳಿಕ ದೇವೇಗೌಡರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಈ ಘಟನೆ ಅವರಿಗೆ ತೀವ್ರ ನೋವುಂಟು ಮಾಡಿದೆ ಎನ್ನಲಾಗಿದೆ. ಈ ನಡುವೆ ಇತ್ತೀಚೆಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಯ ಪತ್ರಕರ್ತರೋರ್ವರು ದೇವೇಗೌಡರು ಇತ್ತೀಚೆಗೆ ಸಣ್ಣ ಪ್ರಮಾಣದಲ್ಲಿ ಗಡ್ಡ ಬೆಳೆಸಿದ್ದನ್ನು ಗಮನಿಸಿ, ಟ್ವೀಟ್ ಮಾಡಿದ್ದರು.

ಈ ಟ್ವೀಟ್‌ನಲ್ಲಿ, ನಾನು ಯಾವಾಗಲೂ ಮಾಜಿ ಪ್ರಧಾನಿಯನ್ನು ‘ಅಪ್ಪಾಜಿ, ದೊಡ್ಡವರು’ ಎಂದು ಗೌರವದಿಂದ ಕರೆಯುತ್ತೇನೆ. ದೇವೇಗೌಡರು ಯಾವಾಗಲೂ ‘ಕ್ಲೀನ್ ಶೇವ್’ ಮಾಡಿಕೊಳ್ಳುತ್ತಿದ್ದರು. ಅವರ ಮುಖದಲ್ಲಿ ಈವರೆಗೆ ಈ ರೀತಿ ಪುಟ್ಟ ಪ್ರಮಾಣದಲ್ಲೂ ಕೂಡ ಗಡ್ಡ ಕಂಡವನಲ್ಲ. ಈ ಫೋಟೊ ನೋಡುವಾಗ ಬೇಸರವಾಗುತ್ತದೆ” ಎಂದು ತಿಳಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X