ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಿತಾಲ್ಕುಚಿಯ ಲಾಲ್‌ಬಜಾರ್‌ನ ಪಂಚಾಯತ್ ಪ್ರಧಾನ ಅನಿಮೇಶ್ ರಾಯ್ ಅವರು ಗುರುವಾರ ರಾತ್ರಿ ಸಹಾಯಕರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
STORY | TMC leader shot at in West Bengal’s Cooch Behar
READ: https://t.co/9HWwUGRiJP pic.twitter.com/aldDx1g7vz
— Press Trust of India (@PTI_News) May 17, 2024
ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅನಿಮೇಶ್ ರಾಯ್ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದು ರಾಯ್ ಅವರ ಬಲ ತೊಡೆಯ ಮೇಲೆ ಗುಂಡೇಟಿನ ಗಾಯವಾಗಿದೆ ಎಂದು ಪೊಲೀಸರು ಹೇಳಿದರು.
ಇದನ್ನು ಓದಿದ್ದೀರಾ? ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ
ಇನ್ನು ರಾಯ್ ಅವರ ಸಹಾಯಕ ಕೂಡ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಈ ಗುಂಡಿನ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ದಾಳಿಯ ಹಿಂದಿರುವವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ನಾವು ಅನಿಮೇಶ್ ರಾಯ್ ಅವರ ಕುಟುಂಬಸ್ಥರೊಂದಿಗೆ ಮಾತನಾಡುತ್ತಿದ್ದೇವೆ. ಆದರೆ ಅವರು ಹೆಚ್ಚು ಮಾಹಿತಿಯನ್ನು ನೀಡುತ್ತಿಲ್ಲ” ಎಂದೂ ಪೊಲೀಸರು ಹೇಳಿದ್ದಾರೆ.
ಸದ್ಯ ಅನಿಮೇಶ್ ರಾಯ್ ಅವರು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.