ಗೃಹ ಸಚಿವರಿಂದ ವಿಧಾನಸೌಧ ಭದ್ರತೆ ಪರಿಶೀಲನೆ; ಇನ್ಮುಂದೆ ಕೈಯಿಂದ ಪಾಸ್‌ ವಿತರಣೆ ಇಲ್ಲ

Date:

Advertisements

ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ‌ ಬಳಿಕ ಭದ್ರತೆಯನ್ನು ಪರಿಶೀಲನೆ ನಡೆಸಿ, ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಕರಿಬಸವನಗೌಡ ಅವರಿಂದ ಮಾಹಿತಿ ಪಡೆದರು. ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳ ಗುಣಮಟ್ಟತೆಯ ಬಗ್ಗೆ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌, “ವಿಧಾನಸೌಧ ಭದ್ರತಾ ವಿಭಾಗದ ವ್ಯಾಪ್ತಿಗೆ ಬರುವ ವಿಧಾನಸೌಧದ 4 ಗೇಟ್‌, ವಿಕಾಸಸೌಧದ 3 ಗೇಟ್, ಹೈಕೋರ್ಟ್‌ನ 6 ಗೇಟ್, ರಾಜಭವನ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಉನ್ನತ ಗುಣಮಟ್ಟದ ಬ್ಯಾಗ್ ಸ್ಕ್ಯಾನರ್,‌ ಮೆಟಲ್ ಡಿಟೆಕ್ಟರ್‌, ಕ್ಯೂಆರ್ ಕೋಡ್ ಯಂತ್ರ ಸೇರಿದಂತೆ ಇನ್ನಿತರ ಉಪಕರಣಗಳನ್ನು ಭದ್ರತೆಗೆ ಅಳವಡಿಸಲಾಗಿದೆ” ಎಂದು ತಿಳಿಸಿದರು.

Advertisements

“ಇನ್ಮುಂದೆ ಆನ್‌ಲೈನ್ ಮೂಲಕ ವಿಧಾನಸೌಧ‌ ಪ್ರವೇಶದ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಪಾಸ್‌ ಮತ್ತು ಗುರುತಿನ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ‌ ಪಡೆದ ಕ್ಯೂಆರ್ ಕೋಡ್ ಪಾಸ್‌ಗಳನ್ನು ಪರಿಶೀಲಿಸಲಿದ್ದಾರೆ. ಗುಣಮಟ್ಟದ ಉಪಕರಣಗಳನ್ನು ಅಳವಡಿಸಿರುವುದರಿಂದ, ಯಾರಾದರು ಅನುಮಾನಸ್ಪದ ವಸ್ತುಗಳನ್ನು ತೆಗೆದುಕೊಂಡು ಬಂದರೆ ಪತ್ತೆಹಚ್ಚಲು ಸುಲಭವಾಗುತ್ತವೆ” ಎಂದರು.

“ಈ ಎಲ್ಲ ಉಪಕರಣಗಳು ಮೂರು ವರ್ಷದ ಹಿಂದೆಯೇ ಹಾಳಾಗಿದ್ದವು. ನಾವು ಈಗ ಅಳವಡಿಸಿದ್ದೇವೆ. ಸುರಕ್ಷತೆ ದೃಷ್ಟಿಯಿಂದ ಅವಶ್ಯಕತೆ ಇತ್ತು. ಇನ್ಮುಂದೆ ಕೈಯಿಂದ ಪಾಸ್‌ಗಳನ್ನು ವಿತರಿಸುವುದಿಲ್ಲ” ಎಂದು ಹೇಳಿದರು.

“ಸಾರ್ವಜನಿಕರು ಪೂರ್ವಭಾಗದ ಗೇಟ್‌ನಿಂದ ಬರಬೇಕು. ಪಶ್ಚಿಮ ದ್ವಾರದಿಂದ ಗಣ್ಯರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಧಾನಸೌಧಕ್ಕೆ ಭದ್ರತೆಯನ್ನು ಇನ್ನಷ್ಟು ಕಠಿಣ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ಈಗಾಗಲೇ ಕೆಎಸ್ಐಎಸ್ಎಫ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಿಧಾನಸೌಧದ ಭದ್ರತೆಯಲ್ಲಿ ಮತ್ತಷ್ಟು ಮಾರ್ಪಾಡು ತರಲಾಗುವುದು” ಎಂದರು.

“ಅಧಿವೇಶನದಲ್ಲಿ ಬೇಕಾಬಿಟ್ಟಿ ಜನಗಳನ್ನು ಬಿಡುವುದಿಲ್ಲ. ಯಾರೋ ಪಾಸ್ ಪಡೆದು ಸಂಸತ್‌ ಭವನ ಪ್ರವೇಶಿಸಿ, ದಾಂಧಲೆ ಎಬ್ಬಿಸಿದ್ದರು. ಆ ರೀತಿಯ ಘಟನೆಗಳು ನಡೆಯಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ, ಸಚಿವರು, ಸಚಿವಾಲಯ, ಅಸೆಂಬ್ಲಿ ಇದೆ.‌ ಇದೆಲ್ಲವನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X