ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.
ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಎಚ್ಚೆತ್ತ ಸಿಬ್ಬಂದಿ, ಮಾಹಿತಿ ರವಾನೆ ಮಾಡಿ ಅಲರ್ಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ತಕ್ಷಣವೇ ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.