ಆರ್‌ಸಿಬಿ-ಸಿಎಸ್‌ಕೆ ಪಂದ್ಯ | ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ; ಬಿಗಿ ಭದ್ರತೆ

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್) ಟೂರ್ನಿಯಲ್ಲಿ ಶನಿವಾರ ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್​ಕಿಂಗ್ಸ್​ (ಸಿಎಸ್‌ಕೆ) ನಡುವೆ ಪಂದ್ಯ ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ. ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಪಾರ್ಕಿಂಗ್ ನಿಷೇಧ

Advertisements

ಶನಿವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಕ್ವೀನ್ಸ್​ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಕಸ್ತೂರಿ ಬಾ ರೋಡ್, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ನೃಪತುಂಗ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು

ಪಂದ್ಯ ನೋಡಲು ಆಗಮಿಸುವ ಜನರಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಸ್ ಕೆಜಿಐಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ (ಕಬ್ಬನ್‌ಪಾರ್ಕ್ ಒಳಭಾಗ)ಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಬೆಂಗಳೂರು ಸಂಚಾರ ಪೊಲೀಸರು ಮೈದಾನದ ಸುತ್ತಮುತ್ತ ಸಂಚಾರ ವಾಹನ ನಿಷೇಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ; ಹೆಚ್‌.ಡಿ.ದೇವೆಗೌಡ

ಪಂದ್ಯ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್‌ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಓರ್ವ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಟ್ರಾಫಿಕ್ ಡಿಸಿಪಿ, ಸೇರಿ 200 ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಮಫ್ತಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X